Thursday, August 21, 2025
24.8 C
Bengaluru
Google search engine
LIVE
ಮನೆರಾಜಕೀಯಹುಬ್ಬಳ್ಳಿಗೆ ಉಪರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆತ್ಮೀಯ ಸ್ವಾಗತ

ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆತ್ಮೀಯ ಸ್ವಾಗತ

ಹುಬ್ಬಳ್ಳಿ : ಉತ್ತರ ಕರ್ನಾಟಕದ ಹೆಬ್ಬಾಗಿಲು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆಗಮಿಸಿದ್ದಾರೆ.

ಹುಬ್ಬಳ್ಳಿಗೆ ಬಂದಿಳಿದ ಉಪರಾಷ್ಟ್ರಪತಿ ಜಗದೀಪ್ ಅವರನ್ನು ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೂ ಗುಚ್ಛ ನೀಡಿ ಆತ್ಮೀಯ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಹಾನಗರ ಪಾಲಿಕೆ ಮೇಯರ್ ವೀಣಾ ಭಾರದ್ವಾಡ ಉಪಸ್ಥಿತರಿದ್ದರು.

ಉಪರಾಷ್ಟ್ರಪತಿ ಅವರು ಇಂದು ಸಂಜೆ ಧಾರವಾಡದ ಐಐಟಿಯಲ್ಲಿ ಪ್ರಮುಖ ಸೌಲಭ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಲ್ಲದೇ, ಎಂ.ಎಂ.ಜೋಶಿ ನೇತ್ರಾಲಯದ ನೂತನ ಸೂಪರ್ ಸ್ಪೆಷಾಲಿಟಿ ಐ ಕೇರ್ ಆಸ್ಪತ್ರೆ “ಐಸಿರಿ” ಉದ್ಘಾಟನೆಯಲ್ಲಿ ಭಾಗವಹಿಸಲಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments