ಹೈದರಾಬಾದ್ : ಈ ಬಾರಿ ಲೋಕಸಭೆ ಚುನಾವಣೆಗೆ ಹೈದರಾಬಾದ್ ಕ್ಷೇತ್ರಕ್ಕೆ ಹಾಲಿ ಸಂಸದ, ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ವಿರುದ್ಧ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ ಎನ್ನಲಾಗಿದೆ. ಹೈದರಾಬಾದ್ ಎಐಎಂಐಎಂ ಪಕ್ಷದ ಭದ್ರಕೋಟೆಯಾಗಿದ್ದು, 1980 ರ ಬಳಿಕ ಇಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿಲ್ಲ. ಹೀಗಾಗಿ ಮತ್ತೆ ಹೈದರಾಬಾದ್ನನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲು ತೆಲಂಗಾಣ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಕ್ರಿಕೆಟ್ ನಾಯಕ ಅಜರುದ್ದೀನ್ ಸಾನಿಯಾ ಹೆಸರನ್ನು ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ. ಸಾನಿಯಾ, ಅಜರುದ್ದೀನ್ ಸಂಬಂಧಿಯಾಗಿದ್ದಾರೆ.