Wednesday, April 30, 2025
35.6 C
Bengaluru
LIVE
ಮನೆರಾಜ್ಯತೋಟದ ಮನೆಯಲ್ಲಿ ತಲೆ ಬುರುಡೆಗಳು: ಅಮಾವಾಸ್ಯೆ ಪೂಜೆ ರಹಸ್ಯ!

ತೋಟದ ಮನೆಯಲ್ಲಿ ತಲೆ ಬುರುಡೆಗಳು: ಅಮಾವಾಸ್ಯೆ ಪೂಜೆ ರಹಸ್ಯ!

ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬ ವ್ಯಕ್ತಿ ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಬಲರಾಮ್ ತಲೆ ಬುರಡೆಗಳನ್ನು ಸಂಗ್ರಹಿಸಿ ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದು ಸದ್ಯ ಸ್ಥಳಕ್ಕೆ ಬಂದ ಪೊಲೀಸರು ಬಲರಾಮ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಮಹಾ ಶಿವರಾತ್ರಿಯ ಅಮಾವಸ್ಯೆ ಮುಗಿದಿದೆ. ರಾಮನಗರದ ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ಬಲರಾಮ್ ಎಂಬ ವ್ಯಕ್ತಿ ರಾತ್ರಿ ವೇಳೆ ಸ್ಮಶಾನದಲ್ಲಿ ಪೂಜೆ ಮಾಡಿದ್ದು ಇದನ್ನು ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಾರ್ವಜನಿಕರ ದೂರಿನ ಮೇರೆಗೆ ಸ್ಮಶಾನಕ್ಕೆ ಬಂದ ಬಿಡದಿ ಪೊಲೀಸರು ವಿಚಾರಣೆ ನಡೆಸಿ ಬಲರಾಮ್ನನ್ನು ವಶಕ್ಕೆ ಪಡೆದಿದ್ದಾರೆ. ಬಲರಾಮ್ ತೋಟದ ಮನೆಯಲ್ಲಿ ಅನೇಕ ಮಾನವರ ತಲೆ ಬುರಡೆಗಳು ಪತ್ತೆಯಾಗಿವೆ. ನನ್ನ ತಾತನ ಕಾಲದಿಂದಲೂ ಬುರುಡೆ ಪೂಜೆ ಮಾಡುತ್ತಾ ಬಂದಿದ್ದೇವೆ ಎಂದು ಬಲರಾಮ್ ತಿಳಿಸಿದ್ದು ವಿಚಾರಣೆ ಮುಂದುವರೆದಿದೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments