ಕಲಬುರ್ಗಿ : ಬಿಜೆಪಿ ಪಕ್ಷದ ಜಿಲ್ಲೆಗಳ ಜಿಲ್ಲಾಧ್ಯಕ್ಷರು ಹಾಗೂ ನಗರ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.ಕಲಬುರ್ಗಿ ಜಿಲ್ಲೆಯಲ್ಲಿ ಕೂಡಾ ನಗರ ಅಧ್ಯಕ್ಷ ಹಾಗೂ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷರ ಆಯ್ಕೆ ಮಾಡಲಾಗಿದೆ.
ಎರಡನೇ ಬಾರಿಗೆ ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷರಾಗಿ ಶಿವರಾಜ್ ಪಾಟೀಲ್ ರದ್ದೇವಾಡಿಗಿ ನೇಮಕ ಮಾಡಲಾಗಿದೆ.ಇನ್ನೂ,ಬಿಜೆಪಿ ನಗರ ಅಧ್ಯಕ್ಷರಾಗಿ ಚಂದ್ರಕಾಂತ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ.ಇಬ್ಬರೂ ಕೂಡ ಯಡಿಯುರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಆಪ್ತರೆ ಆಗಿದ್ದಾರೆ. ಕಲಬುರ್ಗಿ ಜಿಲ್ಲೆಯಲ್ಲಿ ಕೂಡ ವಿಜಯೇಂದ್ರ ಆಪ್ತರಿಗೆ ನೇಮಕ ಮಾಡಿದ್ದಾರೆ.