ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ವಿವಿಧೆಡೆ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 40 ಕ್ಕೂ ಹೆಚ್ಚು ನಕಲಿ ಕ್ಲಿನಿಕ್ ಗಳ ಮೇಲೆ ದಾಳಿ ಮಾಡಿ ಸೀಜ್ ಮಾಡಲಾಗಿದೆ.

ಜಿಲ್ಲಾಧಿಕಾರಿ ಆದೇಶದ ಮೇರೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ನಕಲಿ ಕ್ಲಿನಿಕ್ಗಳನ್ನು ಸೀಜ್ ಮಾಡಿದ್ದರು. ಕಲಬುರ್ಗಿ ಹಾಗೂ ಸೇಡಂ ಸಹಾಯಕ ಆಯುಕ್ತರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಈ ವೇಳೆ ಸರಿಯಾದ ದಾಖಲೆ ತೋರಿಸದ ಹಿನ್ನೆಲೆ ಕ್ಲಿನಿಕ್ ಗಳ ಸೀಜ್ ಮಾಡಲಾಗಿದೆ.


