ಕಲಬುರ್ಗಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ. 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು.


ಕಲಬುರಗಿ ವಿಮಾನ ನಿಲ್ದಾಣದಿಂದ 9:40.ಕ್ಕೆ ಹೆಲಿಕಾಪ್ಟರ್ ಮೂಲಕ ಮಹಾರಾಷ್ಟ್ರದ ಸೋಲಾಪುರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಲ್ಲಿ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳಿ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 1 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಮಧ್ಯಾಹ್ನ 1 ಗಂಟೆ 5 ನಿಮಿಷಕ್ಕೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ. ಇನ್ನೂ, ಪ್ರಧಾನಿ ಮೋದಿ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಎಸ್ ಪಿಜಿ ಟೀಂ ಆಗಮಿಸಿ ಪರಿಶೀಲನೆ ಕೂಡ ಮಾಡುತ್ತಿದೆ.

By admin

Leave a Reply

Your email address will not be published. Required fields are marked *

Verified by MonsterInsights