ಕಲಬುರ್ಗಿ : ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೆವೆಂದು ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಟಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಂಸದ ಉಮೇಶ್ ಜಾದವ್ ಮತ್ತು ಬಿಜೆಪಿಯ ಮುಖಂಡರು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಮ ಮಂದಿರ ಉದ್ಘಾಟನೆಯಲ್ಲಿ ರಾಜ್ಯ ಸರ್ಕಾರ ರಾಜಕೀಯ ಮಾಡುತ್ತಿದೆ.ನಾಳೆ ಅಯ್ಯೋಧೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆ, ಕಲಬುರಗಿಯಲ್ಲಿ ರಾಮ ಮಂದಿರ ಭಾವಚಿತ್ರ ಮೆರವಣಿಗೆಗೆ ಆಯೋಜನೆ ಮಾಡಲಾಗಿದ್ದು,ಮೆರವಣಿಗೆಗೆ ಅವಕಾಶ ನೀಡದೆ ಸರ್ಕಾರ ಶ್ರೀರಾಮ ಮಂದಿರ ಉದ್ಘಾಟನೆ ಸಂಭ್ರಮವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಲಬುರಗಿ ಜಿಲ್ಲೆಯ ಎಲ್ಲೆಡೆ ರಾಮ ಭಕ್ತರು ಮೆರವಣಿಗೆ ಹಮ್ಮಿಕೊಂಡಿದ್ದಾರೆ. ಮೆರವಣಿಗೆಗೆ ಅವಕಾಶ ನೀಡದೆ ಸಂಭ್ರಮಕ್ಕೆ ಅಡ್ಡಿ ಪಡಿಸುತ್ತಿದೆ. ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜಕೀಯ ಮಾಡಬಾರದು. ನಿರ್ಬಂಧ ಏನೇ ಹಾಕಿದ್ರು ರಾಮನ ಮೆರವಣಿಗೆ ನಡೆಯುತ್ತದೆ.ಜಿಲ್ಲೆಯ ಭಕ್ತಿಗೆ ಅಡ್ಡಿ ಪಡಿಸಿದ್ರೆ ಶಕ್ತಿ ತೋರಿಸುತ್ತೇವೆ ಎಂದು ಸಂಸದ ಉಮೇಶ್ ಜಾಧವ್, ಮಾಲೀಕಯ್ಯ ಗುತ್ತೇದಾರ್,ನಗರ ಅಧ್ಯಕ್ಷ ಚಂದು ಪಾಟೀಲ್ ,ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ಸೇರಿದಂತೆ ಬಿಜೆಪಿಯ ನಾಯಕರು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.


