ರಾಜಕೀಯರಾಜ್ಯಸುದ್ದಿ

ಡಾ.ಮಂಜುನಾಥ್ ಬಗ್ಗೆ ಗೌರವವಿದೆ, ಅವರ ಸ್ಪರ್ಧೆ ಸ್ವಾಗತಿಸುತ್ತೇವೆ : ಡಿಕೆಶಿ

ಕಲಬುರುಗಿ; “ನನಗೆ ಡಾ. ಮಂಜುನಾಥ್, ಕುಮಾರಸ್ವಾಮಿ, ದೇವೇಗೌಡರ ಮೇಲೆ ಗೌರವವಿದೆ. ನಾವು ದೇವೇಗೌಡರ ವಿರುದ್ಧ ನಾನು ನಿಂತಿದ್ದೆ, ಒಬ್ಬ ಹೆಣ್ಣು ಮಗಳನ್ನು ನಿಲ್ಲಿಸಿ ಗೆಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧೆ ಮಾಡಿ ಗೆದ್ದಿದ್ದೇನೆ. ಅವರ ಧರ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರ ವಿರುದ್ಧ ನನ್ನ ಸಹೋದರನನ್ನು ನಿಲ್ಲಿಸಿ ಗೆಲ್ಲಿಸಿದ್ದೇವೆ. ಡಾ.ಮಂಜುನಾಥ್ ಅವರ ಅಧಿಕಾರ ಅವಧಿಯನ್ನು ನಮ್ಮ ಸರ್ಕಾರವೂ ವಿಸ್ತರಣೆ ಮಾಡಿಕೊಂಡು ಬಂದಿದೆ. ನಮಗೆ ಅವರ ಮೇಲೆ ಯಾವುದೇ ಬೇಸರ ಇಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದರು.

ನಾವು ನೀತಿ ಮೇಲೆ ಚುನಾವಣೆ ಮಾಡುತ್ತೇವೆ. ಡಿ.ಕೆ ಸುರೇಶ್ ಸಂಸದನಾಗಿ ಕೆಲಸ ಮಾಡುವುದಕ್ಕಿಂತ ಪಂಚಾಯಿತಿ ಸದಸ್ಯನ ರೀತಿಯಲ್ಲಿ ಹಳ್ಳಿ ಹಳ್ಳಿಯಲ್ಲಿ ತಿರುಗಿ ಜನರ ಮಧ್ಯೆ ಕೆಲಸ ಮಾಡಿಕೊಂಡು ಬಂದಿದ್ದಾರೆ.

ಹೀಗಾಗಿ ಯಾರೇ ನಿಂತರೂ ನಾವು ಸ್ವಾಗತಿಸುತ್ತೇವೆ. ಅವರ ಸಹೋದರಿ ಮಂಜುನಾಥ್ ಅವರ ಸ್ಪರ್ಧೆಗೆ ಒಲವಿಲ್ಲದೆ ಕಣ್ಣೀರು ಹಾಕಿದ್ದಾರೆ ಎಂದು ಕುಮಾರಸ್ವಾಮಿ ಅವರೇ ಹೇಳಿಕೆ ನೀಡಿದ್ದಾರೆ. ಅವರ ಮನೆ ವಿಚಾರದಲ್ಲಿ ನಾವು ಮಧ್ಯಪ್ರವೇಶ ಮಾಡುವುದಿಲ್ಲ. ನಾವು ಕುಮಾರಸ್ವಾಮಿ ಅವರ ಮಗ ಹಾಗೂ ತಂದೆ ಇಬ್ಬರ ಚುನಾವಣೆಯನ್ನು ನೋಡಿದ್ದೇವೆ” ಎಂದು ಹೇಳಿದರು

Comments (0)

Your email address will not be published. Required fields are marked *

Back to top button