ಕಲಬುರಗಿ : ಲೋಕಸಭಾ ಚುನಾವಣಾ ದಿನಾಂಕ ನಿಗದಿಯಾದ ಹಿನ್ನಲೆಯಲ್ಲಿ ಅಕ್ರಮ ಚಟುವಟಿಕೆ ತಡೆಯಲು ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಕಲಬುರಗಿ ಜಿಲ್ಲೆಯಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಅಫಜಲಪುರ ತಾಲೂಕಿನಲ್ಲಿ ಒಟ್ಟು 4 ಚೆಕ್ ಪೋಸ್ಟ್ ಗಳ ಸ್ಥಾಪನೆ ಮಾಡಲಾಗಿದ್ದು, ಅಕ್ರಮ ಚಟುವಟಿಕೆ ನಡೆಯದಂತೆ ತಡೆಯಲು ಪೋಲಿಸರಿಂದ ಹದ್ದಿನ ಕಣ್ಣು. ಯಾವುದೇ ವಸ್ತುಗಳನ್ನು ಅಕ್ರಮವಾಗಿ ಸಾಗಣೆ ಮಾಡದಂತೆ ನಿಗಾವಹಿಸಲಾಗಿದೆ.