ಕಾರವಾರ: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಇನ್ನೊಂದ್ಕಡೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಶ್ರೀರಾಮಮಂದಿರ ವಿಚಾರದಲ್ಲಿ ರಾಜಕೀಯ ಜಟಾಪಟಿ ಜ್ವಾಲೆಯಂತೆ ಹೊತ್ತಿ ಉರಿಯುತ್ತಿದೆ. ಇದರ ನಡುವೆ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಇದೀಗ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ಕೇಸ್ ದಾಖಲಾಗಿದೆ.
ಬಾಬ್ರಿ ಮಸೀದಿ ನಿರ್ನಾಮದಂತೆ ಭಟ್ಕಳದಲ್ಲಿಯೂ ಮಾಡುತ್ತೇವೆ. ಅದರ ಸಾಲಿಗೆ ಸಾಲಿಗೆ ಭಟ್ಕಳದ ಚಿನ್ನದ ಪಳ್ಳಿ ಸೇರಲಿದೆ. ಎಲ್ಲೆಲ್ಲಿ ದೇವಸ್ಥಾನ ಒಡೆದು ಮಸೀದಿಗಳನ್ನು ಕಟ್ಟಿದ್ದಾರೋ ಅಲ್ಲೆಲ್ಲ ಮತ್ತೆ ದೇವಸ್ಥಾನ ನಿರ್ಮಾಣವಾಗಲಿದೆ ಎಂದು ಪ್ರಚೋದನಾಕರಿ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಅನಂತ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುವೋಟೊ ಕೇಸ್ ದಾಖಲಾಗಿದೆ. ಅಲ್ಲದೇ, ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ಕಿಡಿಕಾರಿದ್ದರು.
ಜೊತೆಗೆ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರಿಗೆ ಸಂತರ ಶಾಪವಿತ್ತು ಅನ್ನೋ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.ಸಂಸದ ಅನಂತ ಕುಮಾರ್ ಹೆಗಡೆಯವರ ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಕುಮಟಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 505 ಹಾಗೂ 153 (A) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.