ಕೋಲಾರ : ಕೋಲಾರ ಈ ಬಾರಿ ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರ. ಇಂಥ ಲೋಕಸಭಾ ಕ್ಷೇತ್ರದಲ್ಲೀಗ ಮೊದಲ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಷ್ಟ್ರೀಯ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಎವಿ ಮಹೇಶ್ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಎ.ವಿ ಮಹೇಶ್ ಚುನಾವಣಾಧಿಕಾರಿ ಅಕ್ರಂಪಾಷಾಗೆ ಉಮೇದುವಾರಿಕೆ ಸಲ್ಲಿಸಿದ್ದಾರೆ. ಇಂದಿನಿಂದ ನಾಮಪತ್ರ ಸಲ್ಲಿಕೆ ಹಿನ್ನೆಲೆಯಲ್ಲಿ ಡಿಸಿ ಕಚೇರಿ ಸುತ್ತ-ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದೆ.