ಕೋಲಾರ : ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ’ ಎಂಬ ಘೋಷಣೆಯೊಂದಿಗೆ ನಗರದಲ್ಲಿ ವಿಧಾಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಸೋಮವಾರ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿದರು.
ನಗರದ ಬಂಗಾರಪೇಟೆ ವೃತ್ತದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾರ ಹಾಕಿ ಮೆಕ್ಕೆ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ಮಾಡಿದರು. ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆರ್.ಅಶೋಕ್, ಬಸವರಾಜು ಬೊಮ್ಮಾಯಿ, ಶಾಸಕ ಮುನಿಸ್ವಾಮಿ ಸೇರಿದಂತೆ ಬಿಜೆಪಿ ಪ್ರಮುಖ ಮುಖಂಡರು ಹರಿಹಾಯ್ದರು.
ಸಿದ್ದರಾಮಯ್ಯ ಅಧಿವೇಶನಕ್ಕೆ ಮುನ್ನ ರೈತರಿಗೆ ರೂ. 2 ಸಾವಿರ ಬರ ಪರಿಹಾರ ಘೋಷಿಸಿದ್ದರು. ಆದರೆ, ಮುಲ್ಲಾಗಳಿಗೆ ಹಣ ನೀಡಿ ರೈತರಿಗೆ ವಂಚಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಮುಲ್ಲಾಗಳಿಗೆ ರೂ. 10 ಸಾವಿರ ಕೋಟಿ ನೀಡುತ್ತೇನೆಂದು ಹೇಳಿ ರೂ. 1 ಸಾವಿರ ಕೋಟಿ ಬಿಡುಗಡೆ ಮಾಡಿದರು. ಅಪ್ಲಸಂಖ್ಯಾತರ ಕಾಲೋನಿಗಳಿಗೆ ಈ ಅನುದಾನ ನೀಡಿದ್ದಾರೆ. ಆದರೆ ರೈತರಿಗೆ ₹105 ಕೋಟಿಯೂ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.
ರೈತರಿಗೆ ಏಳು ಗಂಟೆ ವಿದ್ಯುತ್ ಎಂದು ಹೇಳಿ ಮೂರು ಗಂಟೆ ನೀಡುತ್ತಿದ್ಧಾರೆ. ನಿಗಮ ಮಂಡಳಿಗೆ ನೇಮಕ ಮಾಡಿ ಎಲ್ಲರಿಗೂ ಸಂಪುಟ ದರ್ಜೆಯ ಸ್ಥಾನ ನೀಡಿ ಸಲಹೆಗಾರರನ್ನು ನೇಮಿಸಿ ಬೇಕಾಬಿಟ್ಟಿ ಹಣ ಖರ್ಚು ಮಾಡುತ್ತಿದ್ದಾರೆ. ಆದರೆ, ಅಭಿವೃದ್ಧಿಗೆ ರೈತರಿಗೆ ಕೊಡಲು ಇವರ ಬಳಿ ಹಣ ಇಲ್ಲ ಎಂದು ಟೀಕಿಸಿದರು.