ಕೊಪ್ಪಳ: ಯಾವುದೇ ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ ಸುಮಾರು 32,92, 500 ರೂಪಾಯಿಗಳನ್ನು ಕೊಪ್ಪಳ ಜಿಲ್ಲೆಯ ಚೆಕ್ ಪೋಸ್ಟ್ ಅಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದಾರೆ.
ತಪಾಸಣೆ ಮಾಡಿ ವಶಪಡಿಸಿಕೊಂಡಿರುತ್ತಾರೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಕಡೆಬಾಗಿಲು ಚೆಕ್ ಪೋಸ್ಟ್ ಬಳಿ ಈ ನಗದು ವಶಪಡಿಸಿಕೊಳ್ಳಲಾಗಿದೆ.
ಚೆಕ್ ಪೋಸ್ಟ್ ಅಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿಯವರು ತಪಾಸಣೆ ಮಾಡುವ ವೇಳೆ ಈ ನಗದನ್ನು ವಶಪಡಿಸಿಕೊಂಡಿರುತ್ತಾರೆ. ಈ ಬಗ್ಗೆ ಸ್ಥಳಕ್ಕೆ ಗಂಗಾವತಿ ತಹಸೀಲ್ದಾರರು ಹಾಗೂ ಗಂಗಾವತಿ ವೃತ್ತದ ಸರ್ಕಲ್ ಇನ್ಸ್ಪೆಕ್ಟರ್ , ಎಂಸಿಸಿ ತಂಡದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪರಿಶೀಲನೆ ನಂತರ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿಯನ್ನು ನೀಡಲಾಗಿದ್ದು, ಮುಂದಿನ ಕ್ರಮಕ್ಕಾಗಿ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗಂಗಾವತಿತಹಸೀಲ್ದಾರ್ ಕಾರ್ಯಾಲಯದ ಪ್ರಕಟಣೆ ಬಂದಿದೆ.