ಕೊಪ್ಪಳ : ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಭಾನುವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದು, ಸ್ಥಳೀಯ ಬಿಜೆಪಿ ಮುಖಂಡರು ಸಚಿವರು ಸ್ವಾಗತಿಸಿದ್ದಾರೆ.
ಕೊಪ್ಪಳ ತಾಲೂಕಿನ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ಸಚಿವೆ ಶೋಭಾ ಭೇಟಿ ನೀಡಿ ವಿಕಸಿತ ಭಾತರದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ವೇಳೆ ಶೋಭಾ ಕರಂದ್ಲಾಜೆಗೆ ಸಂಸದ ಕರಡಿ ಸಂಗಣ್ಣ, ಮಾಜಿ ಶಾಸಕ ಪರಣ್ಣ ಮುನವಳ್ಳಿ ಸಾಥ್ ನೀಡಿದ್ದಾರೆ. ಬಳಿಕ ಮಾತನಾಡಿದ ಅವರು, ವಿಕಸಿತ ಭಾರತದಲ್ಲಿ ಯಾವುದೇ ರಾಜಕೀಯ ಇಲ್ಲ. ರಾಜಕಾರಣವನ್ನು ಮಾಡುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದರು.
ವಿಕಸಿತ ಭಾರತ ಯೋಜನೆಯನ್ನು ಬ್ಯಾಂಕ್ನವರಿಗೆ ಜವಾಬ್ದಾರಿ ವಹಿಸಲಾಗಿದೆ. 2047ರ ವೇಳೆಗೆ ಭಾರತವನ್ನು ವಿಕಸಿತ ಮಾಡುವುದು ಮೋದಿ ಅವರ ಅಪೇಕ್ಷೆ. ಸೋಮವಾರ ರಾಮಮಂದಿರ ಉದ್ಘಾಟನೆ ಆಗುತ್ತಿದೆ. ಮೋದಿ ಅವರ ನೇತೃತ್ವದಲ್ಲಿ ಉದ್ಘಾಟನೆ ಆಗುತ್ತಿದೆ. ರಾಮ ಮಂದಿರ ಉದ್ಘಾಟನೆ ನಿರ್ವಿಘ್ನವಾಗಿ ನೆರವೇರಲಿ ಎಂದು ಪ್ರಾರ್ಥಿಸುತ್ತೇವೆ. ಮೊದಲ ಪೂಜೆ ಆಂಜನೇಯ ಹೆಸರಿನಲ್ಲಿ ಮಾಡುವ ಉದ್ದೇಶದಿಂದ ಇಲ್ಲಿಗೆ ಬರಲಾಗಿದೆ. ಅಂಜನಾದ್ರಿ ಬೆಟ್ಟದಲ್ಲಿ ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಪೂಜೆ ಮಾಡಲಾಗುತ್ತದೆ ಎಂದು ಹೇಳಿದರು.