Freedom TV

ಬಿಸಿಯೂಟ ಸೇವಿಸಿದ್ದ ಮಕ್ಕಳು ಅಸ್ವಸ್ಥ

ಕೊಪ್ಪಳ : ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿನಡೆದಿದೆ. ಶ್ರೀರಂಗದೇವರಾಯ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.

ಮಧ್ಯಾಹ್ನ ಊಟಕ್ಕೆ ಚಿತ್ರಾನ್ನ ಸೇವಿಸಿದ ನಂತರ ಕೆಲಹೊತ್ತಿನಲ್ಲಿ ವಾಂತಿ ಭೇದಿಯಿಂದ ವಿದ್ಯಾರ್ಥಿಗಳು ಬಳಲಿದ್ದಾರೆ. ಕೂಡಲೇ ಅಸ್ವಸ್ಥ ಮಕ್ಕಳನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಪಿಹೆಚ್​ಸಿಗೆ ಡಿಹೆಚ್​ಒ ಡಾ.ಲಿಂಗರಾಜ್​ ಭೇಟಿ ನೀಡಿ ಆರೋಗ್ಯ ವಿಚಾರಣೆ ಮಾಡಿದ್ದಾರೆ. ಸುದ್ದಿ ತಿಳಿದು ಪ್ರಾಥಮಿಕ ಆರೋಗ್ಯ ಪೋಷಕರು ಕೇಂದ್ರಕ್ಕೆ ಆಗಮಿಸಿದ್ದಾರೆ.

Comments (0)

Your email address will not be published. Required fields are marked *

Back to top button