ಕೊಪ್ಪಳ : ಮೋದಿ ಮೋದಿ ಎನ್ನುವವರಿಗೆ ಕಪಾಳಕ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಅವರ ಪ್ರಚೋದನಕಾರಿ ಹೇಳಿಕೆ ಹಿನ್ನಲೆಯಲ್ಲಿ ತಂಗಡಗಿ ವಿರುದ್ಧ ಗಂಗಾವತಿ ತಾಲೂಕಿನ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗ್ಯಾನನಗೌಡ ನಂದನಗೌಡ, ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.
ಮಾರ್ಚ್ 24 ರಂದು ಕಾರಟಗಿಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಶಿವರಾಜ ತಂಗಡಗಿ ವಿರುದ್ಧ ಗ್ಯಾನನಗೌಡ ಕ್ರಮ ತೆಗೆದುಕೊಳ್ಳುವಂತೆ ದೂರು ನೀಡಿದ್ದರು. ಜೊತೆಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಸಚಿವ ಶಿವರಾಜ ತಂಗಡಗಿ ವಿರುದ್ಧ ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಸಧ್ಯ ಸಚಿವ ಶಿವರಾಜ ತಂಗಡಗಿ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.