ರಾಜ್ಯಸುದ್ದಿ

ಸೋಮನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾ ಪಂ. ಸಿ.ಇ.ಓ ದಿಢೀರ್ ಭೇಟಿ

ಮದ್ದೂರು : ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್ ಅವರು ಇಂದು ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದ ಅಂಗನವಾಡಿಗೆ ಅನಿರೀಕ್ಷಿತ ಭೇಟಿ ನೀಡಿ ಅಂಗನವಾಡಿಯ ಮೂಲಭೂತ ಸೌಕರ್ಯವನ್ನು ಪರಿಶೀಲಿಸಿದರು.

ಈ ವೇಳೆ ಅಡುಗೆ ಮನೆಗೆ ತೆರಳಿ ಆಹಾರದ ಗುಣಮಟ್ಟ ಪರಿಶೀಲಿಸಿದರು‌ . ಅಡುಗೆ ಮನೆಯನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ಸೂಚಿಸಿದರು.

ಮಕ್ಕಳಿಗೆ ಅತ್ಯಂತ ಗುಣಮಟ್ಟದ ಪೌಷ್ಠಿಕಾಂಶ ಹೊಂದಿರುವ ಆಹಾರ ನೀಡಬೇಕು. ಮಕ್ಕಳ ದೈಹಿಕ ಬೆಳವಣಿಗೆಯ ಪರಿಶೀಲಿಸಿದರು.

ನಂತರ ಮದ್ದೂರು ತಾಲ್ಲೂಕು ಸೋಮನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಭೇಟಿ ನೀಡಿ ಕಚೇರಿ ಕಾರ್ಯಗಳು, ಯೋಜನೆ, ಕಾರ್ಯಕ್ರಮಗಳ ಅನುಷ್ಠಾನ ಮಾಡಿರುವ ಬಗ್ಗೆ ಮದ್ದೂರು ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಸಾರ್ವಜನಿಕ ಸಮಸ್ಯೆ ಕುರಿತು ಸಹಾಯಕ ನಿರ್ದೇಶಕರು(ಗ್ರಾ.ಉ.), ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇನ್ನಿತರೆ ಸಿಬ್ಬಂದಿಗಳೊಂದಿಗೆ ಸಭೆ ನಡೆಸಿದರು. ನಂತರ ಸೋಮನಹಳ್ಳಿ ಗ್ರಾಮದ ಆರೋಗ್ಯ ಮತ್ತು ಕ್ಷೇಮ ಕೇಂದ್ರ-ಉಪಕೇಂದ್ರಕ್ಕೆ ತೆರಳಿ ಶುಚಿತ್ವ, ಔಷಧ ದಾಸ್ತಾನು ಪರಿಶೀಲಿಸಿ ಉತ್ತಮ ಚಿಕಿತ್ಸೆ ಒದಗಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.

Comments (0)

Your email address will not be published. Required fields are marked *

Back to top button