ಮಂಡ್ಯ : ಜೆಡಿಎಸ್, ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಸಮಾವೇಶವನ್ನು ಇಂದು ಮಂಡ್ಯದಲ್ಲಿ ಆಯೋಜಿಸಲಾಗಿದ್ದು, ನಗರದ ಮೈಶುಗರ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಗಣಿಗ ರವಿಕುಮಾರ್, ನರೇಂದ್ರ ಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಡಿಸಿ ಡಾ.ಕುಮಾರ, ಸಿಇಓ ಸೇರಿ ಹಲವರು ಭಾಗಿಯಾಗಿದ್ರು.
ಗ್ಯಾರಂಟಿ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಲಾಯಿತು.
ಅನ್ನಭಾಗ್ಯ ಯೋಜನೆ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಸಚಿವ ಎನ್.ಚಲುವರಾಯಸ್ವಾಮಿ, ಶಾಸಕ ಗಣಿಗ ರವಿಕುಮಾರ್ ಚೆಕ್ ವಿತರಣೆ ಮಾಡಿದರು.