
ಮಂಡ್ಯ : ಹಾಲು ಉತ್ಪಾದಕರ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಡಿಸಿ ಕಚೇರಿಯವರೆಗೆ ಮೆರವಣಿಗೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿದ್ದರು. ಇದರಿಂದ 26 ಲಕ್ಷ ಗ್ರಾಮೀಣ ರೈತರಿಗೆ ಹೆಚ್ಚಿನ ಅನುಕೂಲವಾಗಿತ್ತು. ಆದ್ರೆ ಇದೀಗ ಕಾಂಗ್ರೆಸ್ ಸರ್ಕಾರ ಜನರ ಶಾಪಕ್ಕೆ ಮಾತ್ರವಲ್ಲ. ಬದಲಾಗಿ ಜಾನುವಾರುಗಳ ಶಾಪಕ್ಕೂ ಗುರಿಯಾಗಿದೆ ಎಂದು ಅಕ್ರೋಶ ಹೊರಹಾಕಿದ್ರು.
ಹಾಲು ಉತ್ಪಾದಕರಿಗೆ 716 ಕೋಟಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡಿದೆ. ಇದರಿಂಧ ಕಾರ್ನಾಟಕದಲ್ಲಿ ಪ್ರತಿನಿತ್ಯ 10 ಲಕ್ಷ ಲೀಟರ್ ಹಾಲು ಉತ್ಪಾದನೆ ಪ್ರಮಾಣ ಕುಸಿದಿದೆ. ಈ ಕೂಡಲೇ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆ ಮಾಡಿ, ರೈತರಿಗೆ ಬಾಕಿ ಹಣ ಪಾವತಿಸಬೇಕು ಎಂದು ಒತ್ತಾಯಿಸಿದ್ರು.
ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ರು. ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ, ಡಾ.ಸಿದ್ದರಾಮಯ್ಯ, ಜೋಗಿಗೌಡ, ಶ್ರೀಧರ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ರು.




