ಮಂಡ್ಯ : ಇಂದು ಮಂಡ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಬೃಹತ್ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. 482 ಕೋಟಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ಬಟನ್ ಒತ್ತುವ ಮೂಲಕ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವ ಸತೀಶ್ ಜಾರಕಿಹೋಳಿ, ಭೈರತಿ ಸುರೇಶ್, ಶಾಸಕರಾದ ನರೇಂದ್ರ ಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಉದಯ್ ಕುಮಾರ್, ಗಣಿಗ ರವಿಕುಮಾರ್ ಸೇರಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು.