ಮಂಡ್ಯ ಫೆ. 6 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ಅವರ 154 ನೇ ಜಯಂತಿಯ ಅಂಗವಾಗಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ಪದವಿ ಪೂರ್ವ ವಿಭಾಗದಲ್ಲಿ ಮಂಡ್ಯ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ (ಮಾಜಿ ಪುರಸಭೆ) ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಉದಯ್ ಕುಮಾರ್ ಎಂ.ಎಸ್ ರಾಜ್ಯ ಮಟ್ಟದಲ್ಲಿ ದ್ವಿತೀಯ ಬಹುಮಾನ ಪಡೆದಿರುತ್ತಾರೆ.
ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣ ದಲ್ಲಿ ಆಯೋಜಿಸಲಾಗಿದ್ದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿಜೇತ ವಿದ್ಯಾರ್ಥಿ ಉದಯ್ ಕುಮಾರ್ ಎಂ ಎಸ್ ಅವರಿಗೆ 21,000 ರೂ ನಗದು ಬಹುಮಾನ ಹಾಗೂ ಪಾರಿತೋಷಕ ನೀಡಿ ಗೌರವಿಸಿದರು.
ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಡೊಳ್ಳಿನ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.