ಮೈಸೂರು : ಮೈಸೂರು ತಾಲ್ಲೂಕಿನ ರಾಮನಹುಂಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ಇನ್ನೂ ಬೋನಿಗೆ ಬಿದ್ದ ಚಿರತೆ 2ವರ್ಷದ ಹೆಣ್ಣು ಚಿರತೆ. ಜಯಪುರ, ರಾಮನಹುಂಡಿ ಸೇರಿದಂತೆ ವಿವಿಧ ಗ್ರಾಮಗಳ ಸುತ್ತಮುತ್ತ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದವು. ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಗ್ರಾಮಸ್ಥರು ಮನವಿ ಮಾಡಿದ್ದರು. ಈ ಹಿನ್ನೆಲೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ, ಚಿರತೆಯನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ. ಚಿರತೆ ಸೆರೆಯಿಂದ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.