Wednesday, August 20, 2025
20.6 C
Bengaluru
Google search engine
LIVE
ಮನೆರಾಜಕೀಯಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿಎಂ.ಸಿದ್ದರಾಮಯ್ಯ ವಿಶ್ವಾಸ

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿಎಂ.ಸಿದ್ದರಾಮಯ್ಯ ವಿಶ್ವಾಸ

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತ ಎಂದಿದ್ದಾರೆ. ಮೈಸೂರು-ಕೊಡಗು ಮತ್ತು ಚಾಮರಾಜನಗರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಆಯೋಜಿಸಿದ್ದ ಮೂರು ಜಿಲ್ಲೆಗಳ ವ್ಯಾಪ್ತಿಯ ಸಚಿವರು, ಮಾಜಿ ಸಚಿವರು, ಶಾಸಕರು, ಮಾಜಿ ಶಾಸಕರು, ಜಿಲ್ಲಾ ಮುಖಂಡರು, ಬೋರ್ಡ್ ಅಧ್ಯಕ್ಷರುಗಳು, ಬ್ಲಾಕ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಸಭೆಯಲ್ಲಿ ಸಿಎಮ್ ಸಿದ್ದರಾಮಯ್ಯ ಭಾಗವಿಹಿಸಿದ್ದರು.

ಇವೆರಡೂ ಕಾಂಗ್ರೆಸ್ ಕ್ಷೇತ್ರಗಳು. ಮತ್ತೆ ನಮ್ಮ ‘ಕೈ’ಗೆ ಬರಲೇಬೇಕು. ಬರುತ್ತವೆ. ಹಿಂದಿನ ಬಾರಿ ಕೆಲವು ಕಾರಣಗಳಿಂದಾಗಿ ಅತ್ಯಂತ ಕಡಿಮೆ ಮತಗಳಿಂದ ನಮಗೆ ಹಿನ್ನೆಡೆಯಾಗಿತ್ತು. ಆದರೆ ಈ ಬಾರಿ ಬಿಜೆಪಿ ಪರವಾದ ಯಾವ ಕಾರಣಗಳೂ ಇಲ್ಲ. ರಾಜ್ಯದಲ್ಲಿ ಬಿಜೆಪಿ ವಿರೋಧಿಯಾದ ಅಲೆ ಜೋರಾಗಿದೆ. ಬಿಜೆಪಿಯ ಬೆಲೆ ಏರಿಕೆಯಿಂದ ಸಂಕಷ್ಟಕ್ಕೆ ತುತ್ತಾಗಿದ್ದ ರಾಜ್ಯದ ಎಲ್ಲಾ ಕುಟುಂಬಗಳಿಗೆ ಕಾಂಗ್ರೆಸ್ ಗ್ಯಾರಂಟಿಗಳು ನೆಮ್ಮದಿ ತರಿಸಿರುವುದನ್ನು ನಾಡಿನ ಜನತೆ ಹೃದಯಪೂರ್ವಕವಾಗಿ ಒಪ್ಪಿಕೊಂಡಿದ್ದಾರೆ ಎಂದರು.

ಇದೇ ವೇಳೆ ಹತ್ತು ವರ್ಷ ಅಧಿಕಾರ ಮಾಡಿದ ಮೋದಿ ಸರ್ಕಾರಕ್ಕೆ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಹೀಗಾಗಿ ಶ್ರೀರಾಮನ ಹೆಸರಲ್ಲಿ ಮತ ಕೇಳುವಂತಾಗಿದೆ. ಸಿ.ಎಂ.ಅಸಮಾಧಾನ ವ್ಯಕ್ತತಪಡಿಸಿದ್ದಾರೆ, ನಾನು ರೈಲು ಬಿಡೋರನ್ನು ನೋಡಿದ್ದೀನಿ. ಆದರೆ ಯಪ್ಪಾ ಯಪ್ಪಾ ಮೋದಿಯವರಷ್ಟು, ಬಿಜೆಪಿಯವರಷ್ಟು ರೈಲು ಬಿಡೋರನ್ನು ನೋಡೇ ಇಲ್ಲ. ಸಿ.ಎಂ.ಸಿದ್ದರಾಮಯ್ಯ ವ್ಯಂಗವಾಡಿದ್ದಾರೆ.ನಾವು ನಡೆಸಿರುವ ಹಲವು ಸಮೀಕ್ಷೆಗಳಲ್ಲಿ ಮೈಸೂರು, ಚಾಮರಾಜನಗರ ಕ್ಷೇತ್ರಗಳಲ್ಲಿ ಗೆಲ್ಲುವುದೂ ಸೇರಿ 20 ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ ಎನ್ಮುವ ವರದಿಗಳು ಬಂದಿವೆ. ಹೀಗಾಗಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಕಾಂಗ್ರೆಸ್ ಪರವಾದ ಅಭೂತಪೂರ್ವ ಫಲಿತಾಂಶ ಹೊರಗೆ ಬರಲಿದೆ ಎಂದು ವಿಶ್ವಾಸದಿಂದ ನುಡಿದರು.

ಹತ್ತು ವರ್ಷ ಕೇಂದ್ರದಲ್ಲಿ ಅಧಿಕಾರ ನಡೆಸಿದ ಬಿಜೆಪಿಯವರಿಗೆ ಜನರ ಬಳಿ ಹೋಗಲು ಮುಖ ಇಲ್ಲ. ಏಕೆಂದರೆ ಈ ಹತ್ತು ವರ್ಷಗಳಲ್ಲಿ ಬಿಜೆಪಿ ಜನರಿಗೆ ತೋರಿಸಲು ಒಂದೇ ಒಂದು ಕೆಲಸವನ್ನೂ ಮಾಡಿಲ್ಲ. ಅದಕ್ಕೇ ಕೇವಲ ಮೋದಿಯವರ ಮುಖ ತೋರಿಸಿ ಚುನಾವಣೆ ಮಾಡ್ತೀವಿ ಎಂದು ಬಿಜೆಪಿ ಹೆಣಗಾಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಮೋದಿ ಪ್ರಚಾರ ಮಾಡಿದ ಎಲ್ಲಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ 50-60 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದೆ ಎಂದರು.

ರಾಜ್ಯಕ್ಕೆ ಬರಗಾಲ ಬಂದು ಐದು ತಿಂಗಳಾದರೂ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರ ಒಂದೇ ಒಂದು ರೂಪಾಯಿ ಬಂದಿಲ್ಲ. ಮೊದಲು ರಾಜ್ಯದ ಜನರಿಗೆ ಅಕ್ಕಿ ಕೊಡ್ತೀವಿ. ದುಡ್ಡು ತಗೊಂಡು ಅಕ್ಕಿ ಕೊಡಿ ಅಂದರೂ ಕೊಡಲಿಲ್ಲ.ಈಗ ರಾಜ್ಯದ ಪಾಲಿನ ಬರ ಪರಿಹಾರ ನಮಗೆ ಕೊಡಿ ಎಂದರೂ ಕೊಡುತ್ತಿಲ್ಲ. ನಮ್ಮ ತೆರಿಗೆ ಹಣಕ್ಕೆ ಬೆಲೆ ಇಲ್ಲವಾ? ನಮ್ಮ ರಾಜ್ಯದ ಜನರ ಬೇಡಿಕೆಗೆ ಬೆಲೆ ಇಲ್ಲವಾ? ಎಂದು ಪ್ರಶ್ನಿಸಿದರು.
ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪುಷ್ಪಾ ಅಮರನಾಥ್, ಆಶ್ರಯ ಯೋಜನೆ ಅಧ್ಯಕ್ಷರಾದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಮೈಸೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ್ ಸೇರಿ ಮೂರು ಜಿಲ್ಲೆಗಳ ಎಲ್ಲಾ ಶಾಸಕರುಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments