ಮೈಸೂರು ; ರಾಜಕೀಯ ಪ್ರಾತಿನಿಧ್ಯದಲ್ಲಿ ಮಹಿಳೆಯರಿಗೆ ಅನ್ಯಾಯವಾಗುತ್ತಿದ್ದು, ಕೇಂದ್ರ ಸರ್ಕಾರ ಶೇ. 33 ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರಬೇಕು ಎಂದು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಒತ್ತಾಯಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಬಿಜೆಪಿ ಸರ್ಕಾರ ಮಹಿಳಾ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಹೇಳಿ ಇನ್ನೂ ಮೀನಾಮೇಷ ಎಣಿಸುತ್ತಿದೆ. ಈಗ ಜಾರಿ ಮಾಡಿದ್ರೆ ನನ್ನಂತಹ ಎಷ್ಟೋ ಹೆಣ್ಣು ಮಕ್ಕಳಿಗೆ ಅನುಕೂಲವಾಗುತಿತ್ತು. ಈಗ ನಾನು ಚಾಮರಾಜನಗರ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ. ಆದರೆ ಈ ಪುರುಷ ಪ್ರಧಾನ ಸಮಾಜದಲ್ಲಿ ನಾವು ಸ್ಪರ್ಧೆ ಮಾಡುವುದಕ್ಕೆ ಆಗುತ್ತಿಲ್ಲ.
ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಜಿಲ್ಲಾ ಪಂಚಾಯಿತಿ ಎಲ್ಲಾ ಕಡೆ ಮಹಿಳೆಯರಿಗೆ ಒಂದಷ್ಟು ಮೀಸಲಾತಿ ಇರುವುದರಿಂದ ನಮ್ಮಂತ ಮಹಿಳೆಯರಿಗೆ ಅಧಿಕಾರ ದಕ್ಕಿದೆ. ಇಲ್ಲೂ ಕೂಡ ಆ ಕೆಲಸ ಆಗಬೇಕು ಎಂದರು.
ನಿಜವಾಗಿಯೂ ಕೆಲವೊಮ್ಮೆ ಮಹಿಳೆಯರನ್ನ ಕಡೆಗಣಿಸುತ್ತಿರುವುದು ಬೇಸರ ತರಿಸುತ್ತಿದೆ. ಕೇಂದ್ರ ಸರ್ಕಾರ ಆದಷ್ಟು ಬೇಗ ಶೇ. 33 ರಷ್ಟು ಮಹಿಳಾ ಮೀಸಲಾತಿ ತರಬೇಕು ಎಂದು ಡಾ,ಪುಷ್ಪಾ ಅಮರನಾಥ್ ಆಗ್ರಹಿಸಿದರು.