ರಾಜ್ಯಸುದ್ದಿ

ಮಾಜಿ ಸಿಎಂ ಎಸ್ಎಂ ಕೃಷ್ಣಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಮೈಸೂರು ; ಮೈಸೂರು ವಿಶ್ವವಿದ್ಯಾನಿಲಯದ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪದವಿಯನ್ನು ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರಿಗೆ ಪ್ರದಾನ ಮಾಡಲಾಯಿತು.

ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್. ಸೀತಾರಾಮ್​ ಹಾಗೂ ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ಭಾಷ್ಯಂ ಸ್ವಾಮೀಜಿ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರದಾನ ಮಾಡಿದರು.

ವಿವಿ ಘಟಿಕೋತ್ಸವದಲ್ಲಿ 32,249 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಯಿತು. ವಿವಿಧ ವಿಷಯಗಳಲ್ಲಿ 100ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳಿಗೆ ಪಿಹೆಚ್​ಡಿ ಪದವಿ ಪ್ರದಾನ ಮಾಡಲಾಯಿತು. 436 ಪದಕಗಳು, 266 ಬಹುಮಾನಗಳನ್ನು 252 ಮಂದಿ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುವುದು. ಇದರ ಜೊತೆಗೆ 6,144 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುವುದು ಹಾಗೂ 26,009 ಮಂದಿ ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ತಿಳಿಸಿದರು.

Comments (0)

Your email address will not be published. Required fields are marked *

Back to top button