Sunday, December 7, 2025
25.5 C
Bengaluru
Google search engine
LIVE
ಮನೆರಾಜ್ಯಕಪಿಲಾ ನದಿಯಲ್ಲಿ ನೀರುಪಾಲಾಗಿದ್ದ ಮೂವರಲ್ಲಿ ಓರ್ವನ ರಕ್ಷಣೆ

ಕಪಿಲಾ ನದಿಯಲ್ಲಿ ನೀರುಪಾಲಾಗಿದ್ದ ಮೂವರಲ್ಲಿ ಓರ್ವನ ರಕ್ಷಣೆ

ಮೈಸೂರು ; ಮೈಸೂರು ಜಿಲ್ಲೆಯ ಕಪಿಲಾ ನದಿಯಲ್ಲಿ ಮುಳುಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ ಮುಂದುವರೆದಿದೆ.

ನಂಜನಗೂಡು ತಾಲ್ಲೂಕಿನ ಹೆಜ್ಜಿಗೆ ಬಳಿ ಕಪಿಲಾ ನದಿಯಲ್ಲಿ ಸ್ನಾನ ಮಾಡುವಾಗ ಈ ದುರ್ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಗವಿರಂಗ, ರಾಕೇಶ್ (19), ಅಪ್ಪು (16) ನೀರು ಪಾಲಾಗಿದ್ದರು. ಇದೀಗ ಗವಿರಂಗ ಎಂಬುವರನ್ನು ರಕ್ಷಣೆ ಮಾಡಲಾಗಿದೆ. ಬಾಲಕ ಅಪ್ಪು ಮೃತ ದೇಹ ಪತ್ತೆಯಾಗಿದೆ. ಇವರನ್ನು ನಂಜನಗೂಡಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಎಂಟು ಜನ ಅಯ್ಯಪ್ಪ ಮಾಲಾಧಾರಿಗಳು ಕಳೆದ ಮೂರು ದಿನಗಳ ಹಿಂದೆ ಶಬರಿ ಮಲೆಗೆ ತೆರಳಿದ್ದರು. ಅಯ್ಯಪ್ಪನ ದರ್ಶನ ಮುಗಿಸಿಕೊಂಡು ಮಾಲಧಾರಿಗಳು ನಂಜನಗೂಡಿಗೆ ಬಂದಿದ್ದಾರೆ. ಇಲ್ಲೇ ಮಾಲೆ ತೆಗೆಯಲು ನಿಶ್ಚಯಿಸಿದ್ದರು.

ಐವರು ಕಪಿಲಾ ನದಿಯ ಹೆಜ್ಜಿಗೆ ಸೇತುವೆ ಬಳಿ ಸ್ನಾನಕ್ಕೆ ಹೋಗಿದ್ದರು. ಸ್ನಾನ ಮಾಡುವಾಗ ಮೂವರು ನೀರು ಪಾಲಾಗಿದ್ದಾರೆ. ಇಬ್ಬರು ಈಜಿ ದಡ ಸೇರಿದ್ದಾರೆ. ಬಳಿಕ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಶೋಧ ಕಾರ್ಯ ನಡೆಸಿದ್ದಾರೆ.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments