ಮೈಸೂರು : ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಇಂದು ಮೈಸೂರಿನಲ್ಲಿ ವಿವಿಧೆಡೆ ಪ್ರತಿಭಟನೆ ನಡೆಸಿದರು.
ದೇಶಕ್ಕೆ ಮೋದಿ, ಮೈಸೂರಿಗೆ ಪ್ರತಾಪ್ ಸಿಂಹ ಎಂದು ಘೋಷಣೆ ಕೂಗಿದ ಅಭಿಮಾನಿಗಳು ಪ್ರತಾಪ್ ಅವರು ಪೋಸ್ಟರ್ ಅಭಿಯಾನ ನಡೆಸಿದ್ದಾರೆ. ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈತಪ್ಪುವ ವಿಚಾರಕ್ಕೆ ಸಂಬಂಧಿಸಿದಂತೆ ಬೈಕ್ ರ್ಯಾಲಿ ನಡೆಸಿ ಹಾಲಿ ಸಂಸದರಿಗೆ ತಮ್ಮ ಬೆಂಬಲ ಸೂಚಿಸಿದರು.
ಪ್ರತಾಪ್ ಸಿಂಹ ಅವರು ಅತ್ಯುತ್ತಮ ಕೆಲಸಗಾರರಾಗಿದ್ದು ರಾಜ್ಯದಲ್ಲಿ ನಂಬರ್ ಒನ್ ಸಂಸದರಾಗಿದ್ದಾರೆ. ಕಳೆದ 70 ವರ್ಷಗಳಲ್ಲಿ ಯಾರೂ ಮಾಡದಷ್ಟು ಕೆಲಸ ಮಾಡಿದ್ದಾರೆ. ಹೀಗಾಗಿ ಅವರಿಗೇ ಟಿಕೆಟ್ ನೀಡಬೇಕು ಎಂದು ಪ್ರತಾಪ್ ಸಿಂಹ ಅಭಿಮಾನಿಗಳು ಒತ್ತಾಯಿಸಿದರು.