ಮೈಸೂರು : ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದೆ. ಮೈಸೂರಿನಲ್ಲಿ ಉದ್ಯಮಿ ವಿವೇಕಾನಂದ ಎಂಬುವವರು ಶಿಕ್ಷಕರಿಗೆ ವಾಚ್ ಕೊಟ್ಟು ವೋಟು ಕೇಳುವ ದೃಶ್ಯ ಫ್ರೀಡಂ ಟಿವಿಗೆ ಲಭ್ಯವಾಗಿದೆ.
ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ದಕ್ಷಿಣ ಶಿಕ್ಷಕರ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ವಿವೇಕಾನಂದ ಎಂಬುವವರು ರಾಜಾರೋಷವಾಗಿ ಶಿಕ್ಷಕರಿಗೆ ವಾಚ್ ಹಂಚಿಕೆ ಮಾಡಿದ್ದಾರೆ.
ಜೆಡಿಎಸ್ ಟಿಕೆಟ್‌ಗಾಗಿ ಮಾಜಿ ಎಂಎಲ್‌ಸಿ ಕೆ.ಟಿ.ಶ್ರೀಕಂಠೇಗೌಡ, ಜೆಡಿಎಸ್ ಮುಖಂಡ ವಿವೇಕಾನಂದ ನಡುವೆ ಪೈಪೋಟಿ ನಡೆಯುತ್ತಿದೆ. ಜೆಡಿಎಸ್‌ನಿಂದ ಗೆದ್ದಿರುವ ಮರಿತಿಬ್ಬೇಗೌಡ ಕಾಂಗ್ರೆಸ್‌ನತ್ತ ಮುಖ ಮಾಡಿರುವ ಹಿನ್ನೆಲೆ ವರಿಷ್ಠರ ಸೂಚನೆ ಮೇರೆಗೆ ಚುನಾವಣೆಗೆ ವಿವೇಕಾನಂದ ಸಜ್ಜಾಗುತ್ತಿದ್ದಾರೆ. ಮತದಾರರನ್ನು ಓಲೈಸಲು ವಾಚ್ ನ್ನು ಗಿಫ್ಟ್ ನೀಡುವ ಮೂಲಕ ಕಸರತ್ತು ನಡೆಸುತ್ತಿದ್ದಾರೆ.