Thursday, August 21, 2025
26.4 C
Bengaluru
Google search engine
LIVE
ಮನೆಸುದ್ದಿರಾಮಲಲ್ಲಾ ಇನ್ಮುಂದೆ ಟೆಂಟ್​ನಲ್ಲಿ ಇರಲ್ಲ ದಿವ್ಯ ಮಂದಿರದಲ್ಲಿ ಇರುತ್ತಾನೆ : ಪ್ರಧಾನಿ ಮೋದಿ

ರಾಮಲಲ್ಲಾ ಇನ್ಮುಂದೆ ಟೆಂಟ್​ನಲ್ಲಿ ಇರಲ್ಲ ದಿವ್ಯ ಮಂದಿರದಲ್ಲಿ ಇರುತ್ತಾನೆ : ಪ್ರಧಾನಿ ಮೋದಿ

ಅಯೋಧ್ಯೆ : ಅಯೋಧ್ಯೆ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ನಂತರ ದೇವಾಲಯದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ , ಇಂದು ನಮ್ಮೆಲ್ಲರ ರಾಮ ಬಂದಿದ್ದಾನೆ. ವರ್ಷಗಳ ಹೋರಾಟದ ಬಳಿಕ ರಾಮ ಬಂದಿದ್ದಾನೆ. ಈ ಶುಭ ಘಳಿಗೆಯಲ್ಲಿ ಎಲ್ಲರಿಗೂ ಶುಭಾಶಯ ತಿಳಿಸಿದರು.  ನಮ್ಮ ರಾಮಲಲ್ಲಾ ಇನ್ಮುಂದೆ ಟೆಂಟ್​ನಲ್ಲಿ ಇರಲ್ಲ. ನಮ್ಮ ರಾಮಲಲ್ಲಾ ದಿವ್ಯ ಮಂದಿರದಲ್ಲಿ ಇರುತ್ತಾನೆ. ಈ ಕ್ಷಣ ಅತ್ಯಂತ ಪವಿತ್ರವಾದದ್ದು, 2024ರ ಜನವರಿ 22 ಇದು ಕೇವಲ ದಿನಾಂಕ ಅಲ್ಲ. ಹೊಸ ಕಾಲಚಕ್ರದ ಉದಯ. ಗುಲಾಮಿ ಮನಸ್ಥಿತಿಯನ್ನು ಎದುರಿಸಿ ನಮ್ಮ ರಾಷ್ಟ್ರ ಎದ್ದು ನಿಂತ ಕ್ಷಣವಿದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಇಂದಿನಿಂದ ದೇಶದಲ್ಲಿ ಹೊಸ ಇತಿಹಾಸ ಉದಯವಾಗಲಿದೆ.  ದೇಶದಲ್ಲಿ ಇಂದು ಪ್ರತಿದಿನವೂ ಒಂದು ವಿಶ್ವಾಸ ಮೂಡುತ್ತಿದೆ. ಈಕ್ಷಣ ದೈವಿಕ ಅನುಭವವನ್ನು ಪಡೆಯುತ್ತಿದ್ದೇನೆ. ಪ್ರಭು ಶ್ರೀರಾಮನ ಆಗಮನದಿಂದ ಇಡೀ ದೇಶ ಸಂಭ್ರಮಗೊಂಡಿದೆ ಎಂದರು.

ದೇಶದ ಪ್ರತಿ ಮನೆಯಲ್ಲಿಂದು ರಾಮ ಜ್ಯೋತಿ ಬೆಳಗಲಿದೆ

ಪ್ರಭು ಶ್ರೀರಾಮನ ಅಸ್ತಿತ್ವಕ್ಕಾಗಿ  ನಮ್ಮ ದೇಶದಲ್ಲಿ ಕಾನೂನು ಸಂಘರ್ಷ ಕೂಡ ನಡೆದಿದೆ. ಭಾರತದ ಬ್ಯಾಯದೇವತೆ ಆದೇಶದಂತೆ ನ್ಯಾಬದ್ಧವಾಗಿ ಮಂದಿರ ನಿರ್ಮಾಣವಾಗಿದೆ. ಇಂದು ಇಡೀ ದೇಶ ರಾಮ ದೀಪಾವಳಿ ಆಚರಿಸುತ್ತಿದೆ. ದೇಶದ ಪ್ರತಿ ಮನೆಯಲ್ಲೂ ಇಂದು ಸಂಜೆ ಶ್ರೀರಾಮನ ಜ್ಯೋತಿ ಬೆಳಗಲಿದೆ.  ಕಾಲಚಕ್ರ ಮತ್ತೆ ಬದಲಾವಣೆಯಾಗಿದೆ. ನ್ನ 11 ದಿನಗಳ ಉಪವಾಸ ವ್ರತ ಶ್ರೀರಾಮನ ಮಂದಿರದಲ್ಲಿ ಅಂತ್ಯಗೊಳಿಸಿದ್ಧೆನೆ. ಸಮುದ್ರದಿಂದ ಸರಯೂವರೆಗೆ ಯಾತ್ರೆಯ ಅವಕಾಶ ಸಿಕ್ಕಿದೆ. ಭಾರತದ ಆತ್ಮದ ಪ್ರತಿ ಕಣ ಕಣದಲ್ಲೂ ಶ್ರೀರಾಮ ಇದ್ದಾನೆ. ಪ್ರತಿ ಯುಗದ ಜನರು ರಾಮನನ್ನು ಗೆಲ್ಲಿಸಿದ್ದಾರೆ. ರಾಮರಸ  ನಮ್ಮ ಜೀವನದ ರೀತಿ, ಅದು ನಿರಂತರವಾದದ್ದು, ರಾಮಮಂದಿರ ನಿರ್ಮಾಣ ಕೇವಲ ವಿಜಯ ಅಲ್ಲ. ವಿನಯದಿಂದ ಕೂಡಿದೆ ಎಂದು ಮೋದಿ ಹೇಳಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments