ದೆಹಲಿ : ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ಕು ಮಂದಿ ಸಜೀವ ದಹನವಾಗಿದ್ದಾರೆ. ಈ ಘಟನೆ ದೆಹಲಿಯ ಗೀತಾ ಕಾಲೋನಿಯಲ್ಲಿ ನಡೆದಿದೆ.
ಪಾರ್ಕಿಂಗ್ ಪ್ರದೇಶದಿಂದ ಬೆಂಕಿ ಹರಡಿ ಇಡೀ ಕಟ್ಟಡವನ್ನೇ ಆವರಿಸಿಕೊಂಡಿತ್ತು, ಹೊಗೆಯನ್ನು ಕಂಡೊಡನೆ ನೆರೆಹೊರೆಯವರು ತಕ್ಷಣ ಅಗ್ನಿ ಶಾಮಕ ಠಾಣೆಗೆ ಕರೆ ಮಾಡಿ ವಿಷಯ ತಿಳಿಸಿದರು. ತಕ್ಷಣವೇ ಅಗ್ನಿಶಾಮಕ ದಳ ತಂಡ ಸ್ಥಳಕ್ಕೆ ಆಗಮಿಸಿ ತುಂಬಾ ಹೊತ್ತಿನ ಬಳಿಕ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಅಪಘಾತದಲ್ಲಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ.
ಮೃತರಲ್ಲಿ ಪತಿ – ಪತ್ನಿಯರ ಜೊತೆಗೆ ಇಬ್ಬರು ಸಹೋದರಿಯರು ಕೂಡ ಮೃತಪಟ್ಟಿದ್ದಾರೆ. ಬೆಳಗ್ಗೆ ಐದು ಗಂಟೆಗೆ ಘಟನೆ ನಡೆದಿದೆ, ಮೃತರನ್ನು ಮನೋಜ್(30), ಸುಮನ್(28), ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.