ಬೆಂಗಳೂರು : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಅಶಾಂತಿ, ಅಡ್ಡಿ ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು, 22ರಂದು ಸರಕಾರಿ ರಜೆ ಘೋಷಿಸಲು ಮನವಿ ಮಾಡಿದರು. ಪಿವಿಆರ್ ಚಿತ್ರಮಂದಿರಗಳಲ್ಲಿ ನೇರ ಪ್ರಸಾರ ಇರಲಿದೆ. ಜನರು ಉತ್ತರಾಭಿಮುಖವಾಗಿ 5 ದೀಪ ಬೆಳಗಿಸಲು ವಿನಂತಿಸಿದರು.
ಇನ್ನು ಕಾಂಗ್ರೆಸ್ಸಿನ ಬಿ.ಕೆ.ಹರಿಪ್ರಸಾದ್ ಸಾಮಾನ್ಯ ವ್ಯಕ್ತಿ ಅಲ್ಲ. ಅವರೂ ಹೇಳಿಕೆ ಕೊಟ್ಟಿದ್ದಾರೆ. ಆದ್ದರಿಂದ ಅಹಿತಕರ ಘಟನೆ ಆಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ ವಹಿಸಲಿ ಎಂದು ಅವರು ಪ್ರಶ್ನೆಗೆ ಉತ್ತರವಾಗಿ ಒತ್ತಾಯಿಸಿದರು. ಬಿ.ಕೆ.ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಟಾರ್ಗೆಟ್ ಮಾಡಿದೆಯೇ ಅಥವಾ ಕೇಂದ್ರ ಸರಕಾರವೇ ಎಂಬುದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ ಎಂದು ನುಡಿದರು.
ಶ್ರೀರಾಮನು ವಾನರ ಸೇನೆಯನ್ನು ಒಗ್ಗೂಡಿಸಿದ್ದು ಕೂಡ ಕರ್ನಾಟಕದಲ್ಲೇ ಎಂದು ಉಲ್ಲೇಖಿಸಿದರು. ತೊರವೆ ರಾಮಾಯಣ ಮೇರುಕೃತಿ ಎಂದ ಅವರು, ನರೇಂದ್ರ ಮೋದಿಜೀ ಅವರ ನೇತೃತ್ವದಲ್ಲಿ ಭಾರತದ ಸಂಸ್ಕøತಿಯ ಪುನರುಜ್ಜೀವನ ಆಗುತ್ತಿದೆ. ಇದು ರಾಮಭಕ್ತರು, ಹಿಂದೂಗಳಲ್ಲಿ ಸಂತಸಕ್ಕೆ ಕಾರಣವಾಗಿದೆ ಎಂದು ತಿಳಿಸಿದರು.