ರಾಜಕೀಯರಾಜ್ಯಸುದ್ದಿ

ಮೈತ್ರಿ ಅಭ್ಯರ್ಥಿ‌ಯನ್ನು ಕಣಕ್ಕಿಳಿಸಲು ಸಭೆ ಕರೆದ ಬಿಜೆಪಿ-ಜೆಡಿಎಸ್

ಮೊನ್ನೇ ಅಷ್ಟೇ ಮಾಜಿ ಮುಖ್ಯಮಂತ್ರಿ ಎಚ್​ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಸಂಬಂಧ ಮಹತ್ವದ ಚರ್ಚೆ ಮಾಡಿದ್ದರು. ಇದರ ಬೆನ್ನಲ್ಲೇ ಇದೀಗ ಕುಮಾರಸ್ವಾಮಿ ಇದೇ ಮೊದಲ ಬಾರಿಗೆ ಬಿಜೆಪಿ ನಾಯಕರ ಜೊತೆ ಸಭೆ ನಡೆಸಿದ್ದಾರೆ.

 

ಇನ್ನು ಫೆ.16 ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆ ನಡೆಯಲಿಕ್ಕಿದೆ. ಈ ಹಿನ್ನೆಲೆ ದೋಸ್ತಿ ಪಕ್ಷಗಳಿಂದ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮೊದಲ ಮೈತ್ರಿ ಚುನಾವಣೆ ಸಭೆ ನಡೆದಿದೆ. ಬಿಜೆಪಿ-ಜೆಡಿಎಸ್ ಪಕ್ಷ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿ‌ ಕಣಕ್ಕಿಳಿಸಲು ಮುಂದಾಗಿದೆ.

ಇಂದು ಇದೆ ವಿಚಾರಕ್ಕೆ ಮಾತನಾಡಿದ ಕುಮಾರಸ್ವಾಮಿಯವರು ವಿಧಾನಪರಿಷತ್ ಚುನಾವಣೆ ಸಂಬಂಧ ಚರ್ಚೆ ಮಾಡಿದ್ದೇವೆ. ಇವತ್ತು ಚರ್ಚೆಯ ಬಗ್ಗೆ ಹೈಕಮಾಂಡ್ ನಾಯಕರಿಗೆ ತಿಳಿಸುತ್ತೇವೆ. ಇಲ್ಲಿಂದಲೇ ಒಂದು ಸಂದೇಶ ಹೊಗಲಿದೆ. ಮುಂಬರುವ ಸ್ಥಳೀಯ ಚುನಾವಣೆ ಸಂಬಂಧ ಜೊತೆಗೂಡಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ಯಡಿಯೂರಪ್ಪ ಅವರ ಮನೆಯಲ್ಲಿ ಎರಡೂ ಪಕ್ಷದ ಪ್ರಮುಖ ನಾಯಕರು ಸಭೆ ನಡೆಸಿದ್ದೇವೆ. ಪ್ರಥಮ ಹಂತದಲ್ಲಿ ಮೊದಲ ಸಭೆ ಮಾಡಿದ್ದೇವೆ. ಮುಂದೆ ಬರುವ ವಿಧಾನಪರಿಷತ್ ಚುನಾವಣೆಗೆ ಬೈ ಎಲೆಕ್ಷನ್ ಇದೆ. ಅಭ್ಯರ್ಥಿ ಆಯ್ಕೆ ಚರ್ಚೆ ಮಾಡಿದ್ದೇವೆ. ಬಿಜೆಪಿ ಹೈಕಮಾಂಡ್ ಗೆ ಮಾಹಿತಿ ನೀಡುತ್ತೇವೆ. ಮುಂದಿನ ಚುನಾವಣೆಗೆ ಇಲ್ಲಿಂದಲೇ ಸಂದೇಶ ಕೊಡಲಿದ್ದೇವೆ. ಮೋದಿ ಅವರ ಕೈ ಬಲಪಡಿಲಸಲು ಒಟ್ಟಾಗಿ ಹೋಗ್ತೀವಿ. ರಾಜ್ಯದಲ್ಲಿ ಕೆಟ್ಟ ಸರ್ಕಾರ ಇದೆ, ಅದು ತೊಲಗಬೇಕು ಎಂದು ಹೇಳಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದು, ವಿಧಾನಪರಿಷತ್ ಗೆ ಸೀಮಿತವಾಗಿ ಎಲ್ಲರೂ ಚರ್ಚೆ ಮಾಡಿದ್ದೇವೆ. ಚರ್ಚೆಯ ವಿಚಾರ ದೆಹಲಿಗೆ ತಿಳಿಸ್ತೇವೆ. ಒಟ್ಟಾಗಿ ಚುನಾವಣೆ ಎದುರಿಸ್ತೇವೆ. ಎಂಎಲ್‌ಸಿ ಚುನಾವಣೆ ಬಂದಿದೆ. ಒಟ್ಟಾಗಿ ಎದುರಿಸ್ತೇವೆ‌ ಎಂದು ಹೇಳಿದ್ದಾರೆ.

ಇನ್ನು ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ, ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನ ಎ.ಪಿ ರಂಗನಾಥ ಆಯ್ಕೆಯಾಗಿದ್ದಾರೆ. ದೋಸ್ತಿಗಳ ಸಭೆಯಲ್ಲಿ ಜೆಡಿಎಸ್ ನ ಎ.ಪಿ ರಂಗನಾಥ್ ಹೆಸರು ಪ್ರಸ್ತಾಪವಾಗಿದೆ. ಬಾಲರಾಮನ ಪ್ರತಿಷ್ಠಾಪನೆ ಬಳಿಕ ಘೋಷಣೆ ಮಾಡಲು ಎರಡು ಪಕ್ಷಗಳು ಮುಂದಾಗಿವೆ.

Comments (0)

Your email address will not be published. Required fields are marked *

Back to top button