ಹುಬ್ಬಳ್ಳಿ : ಹಾವೇರಿ ಜಿಲ್ಲೆಯ ಹಾನಗಲ್ ಮಹಿಳೆಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವನ್ನು ಅಲ್ಲಿಯ ಪೊಲೀಸರು ಮುಚ್ಚಿ ಹಾಕುವ ಪ್ರಯತ್ನ ಮಾಡಿದ್ದರು, ಅದು ವಿಫಲವಾಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಹಾನಗಲ್ ಅತ್ಯಾಚಾರ ಸಂತ್ರಸ್ತೆಗೆ ಹಣ ಕೊಟ್ಟು ಆಮಿಷವೊಡ್ಡಿ ಪ್ರಕರಣ ಹಿಂಪಡೆಯುವ ಪ್ರಯತ್ನ ಮಾಡಿದ್ರು. ಪ್ರಕರಣವನ್ನು ಸ್ಥಳೀಯ ಪೊಲೀಸರು ಮುಚ್ಚಿ ಹಾಕುತ್ತಾರೆ. ಪ್ರಕರಣದ ತನಿಖೆಗೆ SIT ರಚನೆ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ನಂತರ ಮಾತನಾಡಿದ ಅವರು ನಾಳೆ ಹಾವೇರಿಗೆ ಸಿಎಂರವರು ಬರುತ್ತಿದ್ದಾರೆ. ಅಂದಾದ್ರೂ ಹಾನಗಲ್ ಪ್ರಕರಣ ಎಸ್ಐಟಿಗೆ ನೀಡ್ತಾರೆ ಅನ್ನೋ ನಿರೀಕ್ಷೆ ಇಟ್ಟುಕೊಂಡಿದ್ದೇವೆ ಎಂದರು.