Thursday, September 11, 2025
27.5 C
Bengaluru
Google search engine
LIVE
ಮನೆರಾಜಕೀಯಕಾಂಗ್ರೆಸ್ ತೀರ್ಮಾನ ದುರ್ದೈವದ ಸಂಗತಿ: ಬಿ.ಎಸ್. ಯಡಿಯೂರಪ್ಪ

ಕಾಂಗ್ರೆಸ್ ತೀರ್ಮಾನ ದುರ್ದೈವದ ಸಂಗತಿ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ರಾಮಮಂದಿರ ಉದ್ಘಾಟನೆ ಮತ್ತು ರಾಮನ ಮೂರ್ತಿಯ ಪ್ರತಿಷ್ಠಾಪನೆಯ ವಿಶೇಷ ಸಂದರ್ಭದಲ್ಲಿ ನಾವಿದ್ದೇವೆ. ಕಾಂಗ್ರೆಸ್ ಮುಖಂಡರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ನಗರದ ಹೋಟೆಲ್ ರಮಾಡದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಲೋಕಸಭಾ ಚುನಾವಣೆ 2024ರ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ ಎಂದು ತಿಳಿಸಿದರು. ರಾಮರಾಜ್ಯ, ರಾಮನ ಕನಸು ನನಸು ಆಗಬೇಕಿದೆ. ಆದರೆ, ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತರುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಕಾಂಗ್ರೆಸ್ಸಿಗರು ಯಾಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಇಂಥವರು ಸೇರಿ ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದು ನುಡಿದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments