ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಯಿಂದ ವಾಪಸ್ ಆಗಿದ್ದಾರೆ. ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಮಾತನಾಡಿದ ಯಡಿಯೂರಪ್ಪ, 28 ಲೋಕಸಭಾ ಕ್ಷೇತ್ರಗಳ ಬಗ್ಗೆ ಚರ್ಚೆಯಾಗಿದೆ. ಇಂದು ಅಥವಾ ನಾಳೆ ಅಮಿತ್ ಶಾ ಅವತ್ತು ಮತ್ತು ಮೋದಿಯವರು ಅಂತಿಮ ತೀರ್ಮಾನ ಮಾಡುತ್ತಾರೆ.
ಇನ್ನು ರಾಜ್ಯದ ಲೋಕಸಭಾ ಟಿಕೆಟ್ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆದಿವೆ. ಆ ಚರ್ಚೆಯಾಗುತ್ತಿರುವ ವಿಚಾರಗಳಿಗೆ ಪರಿಹಾರ ಹುಡುಕುವ ಕೆಲಸವನ್ನ ವರಿಷ್ಟರು ಮಾಡ್ತಾರೆ ಎಂದು ಯಡಿಯೂರಪ್ಪ ತಿಳಿಸಿದ್ರು. ಇನ್ನು ಲೋಕಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ಕಡೆ ನರೇಂದ್ರ ಮೋದಿ ಬರಲಿದ್ದಾರೆ. ಶಿವಮೊಗ್ಗಕ್ಕೂ ಬರ್ತಾರೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ