Wednesday, April 30, 2025
24 C
Bengaluru
LIVE
ಮನೆರಾಜಕೀಯಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಅಭಿವೃದ್ಧಿಗೆ ಬದ್ದ: ಡಾ. ಆರ್ ಎಮ್ ಕುಬೇರಪ್ಪ

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ನೀಡಿದರೆ ಅಭಿವೃದ್ಧಿಗೆ ಬದ್ದ: ಡಾ. ಆರ್ ಎಮ್ ಕುಬೇರಪ್ಪ

ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಪರವಾಗಿ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಎರಡು ತಿಂಗಳಿನಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನಾಯಕರಿಗೆ ಭೇಟಿ ಮಾಡಿ ನನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದ್ದೇನೆ. 8ತಾಲೂಕಿನ ಶಾಸಕರಿಗೆ ವ್ಯಯಕ್ತಿಕವಾಗಿ ಭೇಟಿ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದ್ದೇನೆ. ಜಿ. ಪಂ, ತಾ. ಪಂ, ಗ್ರಾಂ. ಪಂ, ಬ್ಲಾಕ್ ಕಾಂಗ್ರೇಸ್ ಸದಸ್ಯರಿಗೆ ಸುಮಾರು 10ಸಾವಿರ ಪತ್ರಗಳನ್ನು ಬರೆದಿದ್ದೇನೆ. ಜೊತೆಗೆ ಎಐಸಿಸಿ ಮುಖಂಡರಿಗೂ ಟಿಕೆಟ್ ನೀಡುವಂತೆ ಮನವಿ ಸಲ್ಲಿಸಿದ್ದೇನೆ ಎಂದು ಡಾ. ಆರ್ ಎಮ್ ಕುಬೇರಪ್ಪ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಸಂಸದರು ಯಾವುದೇ ಕೇಲಸ ಮಾಡಿಲ್ಲ. ಹಿಗಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ನಮ್ಮನ್ನು ಜನತೆ ಬೆಂಬಲಿಸಬೇಕು. ನೀರಾವರಿ, ರಸ್ತೆ, ಶಿಕ್ಷಣ ಸೇರಿದಂತೆ ಆರ್ಥಿಕ ಅಭಿವೃದ್ಧಿ ಮಾಡುವ ಕನಸು ಇಟ್ಟುಕೊಂಡಿದ್ದೇನೆ. ಹಾಗಾಗಿ ಪಕ್ಷದ ಮುಖಂಡರು ಹಾಗೂ ಮತದಾರರು ನನಗೆ ಆಶಿರ್ವಾದ ಮಾಡಬೇಕು. ನನಗೆ ಒಂದು ಅವಕಾಶ ಮಾಡಿಕೊಡಬೇಕು. ನಾಲ್ಕು ಬಾರಿ ಎಂ ಎಲ್ ಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಹಾಗಾಗಿ ನನಗೆ ಕ್ಷೇತ್ರದ ಮತದಾರರು ಹೆಚ್ಚು ಚಿರಪರಿಚಿತರಿದ್ದಾರೆ. ಹಾಲಿ ಶಾಸಕರು ಹಾಗೂ ಮಾಜಿ ಶಾಸಕರು ನನಗೆ ಬೆಂಬಲ ನೀಡಬೇಕು. ಇದರಿಂದ ಕ್ಷೇತ್ರದ ಅಭಿವೃದ್ಧಿ ಮಾಡಲು ನಾನು ಬದ್ದವಾಗಿದ್ದೇನೆ ಎಂದರು.

ಕೈಗಾರಿಕೆಗಳಿಗೆ ಹೆಚ್ಚು ಒತ್ತು ನೀಡುತ್ತೇನೆ. ಹಿಂದಿನ ಸಂಸದರು ಕೈಗಾರಿಕೆ ತರಬಹುದಿತ್ತು. ಆದರೆ, ಸಂಸದರ ನಿರ್ಲಕ್ಷದಿಂದ ಕ್ಷೇತ್ರದಲ್ಲಿ ನಿರುದ್ಯೋಗ ತಾಂಡವಾಡುತ್ತಿದೆ. ಮೂರು ಎರಡು ಬಾರಿ ಸಂಸದರಾಗಿ ಆಯ್ಕೆಯಾದರೂ ಕ್ಷೇತ್ರದ ಜನತೆಯ ಕೈಗೆ ಸಿಗದೇ ಸಂಸದರು ಮತದಾರರಿಗೆ ಮೊಸ ಮಾಡಿದ್ದಾರೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ನಮ್ಮ ಪಕ್ಷಕ್ಕೆ ಈ ಬಾರಿ ಜನತೆ ಆಶಿರ್ವಾದ ಮಾಡಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದರು.

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments