Wednesday, January 28, 2026
24.9 C
Bengaluru
Google search engine
LIVE
ಮನೆರಾಜಕೀಯಬಲಿಪಶು ಮಾಡಲೆಂದೇ ಮಲ್ಲಿಕಾರ್ಜುನ ಖರ್ಗೆಯನ್ನು ಘಟಬಂಧನ್​ಗೆ ನಾಯಕನನ್ನಾಗಿ ಮಾಡಲಾಗುತ್ತಿದೆ : ಪ್ರಹ್ಲಾದ್ ಜೋಶಿ

ಬಲಿಪಶು ಮಾಡಲೆಂದೇ ಮಲ್ಲಿಕಾರ್ಜುನ ಖರ್ಗೆಯನ್ನು ಘಟಬಂಧನ್​ಗೆ ನಾಯಕನನ್ನಾಗಿ ಮಾಡಲಾಗುತ್ತಿದೆ : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಇಂಡಿಯಾ ಕೂಟದ ಅಸ್ತಿತ್ವ ಎಲ್ಲಿದೆ. ತೋರಿಕೆಗೆ ಅಷ್ಟೇ ಇದೊಂದು ಘಟಬಂಧನ್​. ಮಹಾರಾಷ್ಟ್ರ , ಉತ್ತರಪ್ರದೇಶ , ಪಶ್ಚಿಮ ಬಂಗಾಳದಲ್ಲಿ ಜಗಳ ಆಡುತ್ತಿದ್ದಾರೆ. ಕೇರಳದಲ್ಲಿ ಕಮ್ಯುನಿಸ್ಟ್​ ಸರ್ಕಾರವಿದೆ.  ಕಮ್ಯುನಿಸ್ಟ್ ಸರ್ಕಾರ ನಮ್ಮ ಮೇಲೆ ಅತ್ಯಾಚಾರ ಮಾಡುತ್ತಿದೆ. ನಮ್ಮ ಕಾರ್ಯಕರ್ತರನ್ನು ಹೊಡಿಯುತ್ತಿದ್ದಾರೆ ಅಂತಾ ಅಲ್ಲಿನ ಕಾರ್ಯಕರ್ತರು ಹೇಳಿತ್ತಿದ್ದಾರೆ. ನಿಮ್ಮಲ್ಲೇ ಹೊಂದಾಣಿಕೆ ಇಲ್ಲ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಒಕ್ಕೂಟದಿಂದ ಹೊರ ಬರುವ ವಿಚಾರ ಮಾಡುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಸೋತರೆ ಗಾಂಧಿ ಕುಟುಂಬದ ಮೇಲೆ ಬರಬಾರದು, ಬಲಿಪಶು ಮಾಡಲೆಂದೇ ಮಲ್ಲಿಕಾರ್ಜುನ ಖರ್ಗೆ ಅವರನ್ನು ಘಮಂಡಿ ಘಟಬಂಧನ್​ ನಾಯಕನನ್ನಾಗಿ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಸ್ವಚ್ಛತೀರ್ಥ ಅಭಿಯಾನಕ್ಕೆ ಪ್ರಧಾನಿ ಮೋದಿ ಕರೆ ನೀಡಿದ ಹಿನ್ನಲೆಯಲ್ಲಿ ಪ್ರಹ್ಲಾದ್​ ಜೋಶಿ ಇಂದು ಹುಬ್ಬಳ್ಳಿಯ ಉಣಕಲ್ಲ ಸಿದ್ದಪ್ಪಜ್ಜ ಮೂಲ ಗದ್ದುಗೆ ಮಠದಲ್ಲಿ ಸ್ವಚ್ಛತೆ ಮಾಡಿದರು. ಬಳಿಕ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ಒಟ್ಟಿನಲ್ಲಿ ಅವರಲ್ಲೆ ಹೊಂದಾಣಿಕೆ ಇಲ್ಲ. ಕಾಂಗ್ರೆಸ್​ನವರು ಅಸಹಾಯಕ ಸ್ಥಿತಿಗೆ ಬಂದಿದ್ದಾರೆ. ಅವರು ಸೋಲುವುದು ಗ್ಯಾರಂಟಿ, ಜಗ್ಗೇಶ್​ ಭಾಷೆಯಲ್ಲಿ ಹೇಳೋದಾದರೆ ಢಮಾರ್​ ಆಗೋದು ಗ್ಯಾರಂಟಿ. ಅದಕ್ಕೆ ಮಲ್ಲಿಕಾರ್ಜುನ್​​ ಖರ್ಗೆಯವರನ್ನು ಬಲಿ ಕೋಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಭಾರತ ನ್ಯಾಯಯಾತ್ರೆಗೆ ಬಿಜೆಪಿ ಸರ್ಕಾರದ ರಾಜ್ಯಗಳು ಅನುಮತಿ ನೀಡದ ಆರೋಪದ ವಿಚಾರವಾಗಿ ಮಾತನಾಡಿದ ಅವರು ಮಣಿಪುರ ಸರ್ಕಾರ ಅನುಮತಿ ಕೊಟ್ಟಿದೆ. ತೆಲಂಗಾಣದಲ್ಲಿ ಕಾಂಗ್ರೆಸ್​​ ಗೆದ್ದಿದ್ದಕ್ಕೆ ಉತ್ತರ ಕೋಟ್ಟಿದ್ದೆ. ರಾಹುಲ್​ ಗಾಂಧ ಪ್ರಚಾರ ಮಾಡದೇ ಇರುವುದು ದುರ್ದೈವ ಅಂದಿದೆ. ಅವರು ಹೆಚ್ಚು ಅಡ್ಡಾಡಿದಷ್ಟು ಒಳ್ಳಯದು. ಅಲ್ಲೆಲ್ಲಿ ಹೋಗುತ್ತಾರೆ? ಅವರು ಏನು ಅಂತಾ ಜನ ನೋಡುತ್ತಾರೆ. ಅವರಿಗೆ ಎಲ್ಲಾ ವ್ಯವಸ್ಥೆಯನ್ನು ನಾವು ಮಾಡುತ್ತೇವೆ ಇನ್ನು ಜಗದೀಶ್​ ಶೆಟ್ಟರ್​​ ಘರ್​ ವಾಪಸಿ ಬಗ್ಗೆ ನನಗೆ ಗೊತ್ತಿಲ್ಲ. ಅದರ ಬಗ್ಗೆ ಚರ್ಚೆ ನನಗೆ ಅದು ಸಂಬಂಧವಿಲ್ಲ ಎಂದರು.

 

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments