ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸದೆ ಸುಮಲತಾ ಅಂಬರೀಶ್ ಆಪ್ತ ಇಂಡುವಾಳು ಸಚ್ಚಿದಾನಂದ ಭೇಟಿಯಾಗಿದ್ದಾರೆ. ಇಂಡುವಾಳು ಸಚ್ಚಿದಾನಂದ ಭೇಟಿ ರಾಜಕೀಯ ವಲಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.
ಯಾಕಂದರೆ ಸುಮಲತಾ ಅಂಬರೀಶ್ ಹಾಗೂ ಕುಮಾರಸ್ವಾಮಿ ಮಧ್ಯೆ ವಾಕ್ಸಮರ ನಿರಂತರವಾಗಿ ನಡೆಯುತ್ತಿರುತ್ತದೆ. ರಾಜಕೀಯದಲ್ಲಿ ಹಾವು, ಮುಂಗೂಸಿಯಂತೆ ಇರುವ ಹೊತ್ತಲ್ಲಿ ಸಚ್ಚಿದಾನಂದ ಅವರು ಕುಮಾರಸ್ವಾಮಿಯನ್ನು ಭೇಟಿ ಮಾಡಿರೋದು ಚರ್ಚೆಗೆ ಕಾರಣವಾಗಿದೆ. ಇಬ್ಬರು ನಾಯಕರ ಭೇಟಿ ಲೋಕಸಭೆ ಚುನಾವಣೆಗೆ ಸಂಬಂಧಿಸಿ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಯಾಕಂದರೆ ಈ ಬಾರಿಯ ಲೋಕಸಭಾ ಚುನಾವಣೆಯನ್ನು ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಎದುರಿಸುತ್ತಿದೆ. ಸುಮಲತಾ ಅಂಬರೀಶ್ ಬಿಜೆಪಿಗೆ ಬೆಂಬಲವಾಗಿ ನಿಂತಿದ್ದಾರೆ. ಹೀಗಿರುವಾಗ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಹಿನ್ನೆಲೆಯಲ್ಲಿ ಸಚ್ಚಿದಾನಂದ ಅವರು ಕುಮಾರಸ್ವಾಮಿ ಜೊತೆಗೆ ಸುಮಲತಾ ಅಂಬರೀಶ್ ರಾಜಕೀಯ ಭವಿಷ್ಯದ ಬಗ್ಗೆ ಚರ್ಚೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಭೇಟಿ ಬೆನ್ನಲ್ಲೇ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಗೆ ಸಿಗುತ್ತಾ?
ಇನ್ನು ಮಂಡ್ಯ ಪ್ರತಿಯೊಂದು ಚುನಾವಣೆಯೂ ದೇಶದ ಗಮನ ಸೆಳೆಯುತ್ತಿದೆ. ಹಾಗೆಯೇ ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್ ಗೆ ಸಿಗುತ್ತಾ? ಅಥವಾ ಬಿಜೆಪಿ ತೆಕ್ಕೆಗಾ? ಅನ್ನೋ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರ್ತಿದೆ..ಈಗಿರುವ ಹೈಕಮಾಂಡ್ ನಾಯಕರಿಂದ ಹೆಚ್.ಡಿ.ಕುಮಾರಸ್ವಾಮಿಗೆ ಏನಾದರೂ ಭರವಸೆಗಳು ಸಿಕ್ಕಿವೆಯಾ? ಮಂಡ್ಯ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಸ್ಪರ್ಧಿಸೋದಾದ್ರೆ ಸುಮಲತಾ ಅಂಬರೀಶ್ ರಾಜಕೀಯ ನೆಲೆ ಏನು? ಅನ್ನೋದ್ರ ಬಗ್ಗೆ ಚರ್ಚೆಗಳು ಶುರುವಾಗಿದೆ.