ರಾಜಕೀಯರಾಜ್ಯಸುದ್ದಿ

ಶೆಟ್ಟರ್‌ ಬ್ಯಾಕ್‌ ಟು ಬಿಜೆಪಿ.. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ಲಾನ್‌ ಸಕ್ಸಸ್.!‌

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲು ಆರಂಭವಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್​​ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್​ ಶೆಟ್ಟರ್​​ ಅವರು ಮತ್ತೆ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಒಂದು ದೆಹಲಿಯಲ್ಲಿ ಅಮಿತ್​​ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಬಿಜೆಪಿಗೆ ಸೇರ್ಪಡೆ ಆಗಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಹಾಗೂ ಜಗದೀಶ್​ ಶೆಟ್ಟರ್​​ ಅವರು ದೆಹಲಿಯಲ್ಲಿನ ಅಮಿತ್​ ಶಾ ನಿವಾಸದಲ್ಲಿ ಇಂದು ಅಮಿತ್​ ಶಾ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ವೇಳೆ ಶೆಟ್ಟರ್​ ಮನವೊಲಿಸುವಲ್ಲಿ ಅಮಿತ್​ ಶಾ ಯಶಸ್ವಿಯಾಗಿದ್ದು, ಪಕ್ಷಕ್ಕೆ ಮರಳಲು ಶೆಟ್ಟರ್​ ಒಪ್ಪಿಗೆ ಸೂಚಿಸಿದ್ದಾರೆ.

 

Comments (0)

Your email address will not be published. Required fields are marked *

Back to top button