ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿಗೆ ಆಗಮಿಸಲಿದ್ದಾರೆ ಮಹಾರಾಷ್ಟ್ರ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಭಾಗಿಯಾಗುವ ನಿಟ್ಟಿನಲ್ಲಿ ಜಿಲ್ಲೆಗೆ ಆಗಮಿಸಿ ಇಲ್ಲಿಂದ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕಲಬುರಗಿ ವಿಮಾನ ನಿಲ್ದಾಣ ಸುತ್ತಮುತ್ತ ಡ್ರೋನ್ ಕ್ಯಾಮೆರಾಗಳ ಹಾರಾಟ ನಿಷೇಧಿಸಲಾಗಿದೆ.
ಕಲಬುರಗಿ ಏರ್ಪೋರ್ಟ್ ಸುತ್ತಮುತ್ತ ಡ್ರೋಣ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಡ್ರೋಣ್ ಕ್ಯಾಮರಾ ಬಳಕೆಯನ್ನು ಜಿಲ್ಲಾಡಳಿತವು ನಿಷೇಧಿಸಿದೆ. CRPC ಸೆಕ್ಷನ್ 144 ಅಡಿಯಲ್ಲಿ ಡ್ರೋನ್ ಕ್ಯಾಮರಾ ಹಾರಾಟ ನಿಷೇಧಿಸಲಾಗಿದ್ದು, ಇಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಯಾರು ಕೂಡ ಡ್ರೋಣ್ ಹಾರಿಸುವಂತಿಲ್ಲ.