Wednesday, April 30, 2025
35.6 C
Bengaluru
LIVE
ಮನೆರಾಜಕೀಯಬಿಜೆಪಿ ಯಾವತ್ತೂ ದೇಶ ಕಟ್ಟಿಲ್ಲ ; ಸಚಿವ ದಿನೇಶ್ ಗುಂಡೂರಾವ್

ಬಿಜೆಪಿ ಯಾವತ್ತೂ ದೇಶ ಕಟ್ಟಿಲ್ಲ ; ಸಚಿವ ದಿನೇಶ್ ಗುಂಡೂರಾವ್

ಮೈಸೂರು ; ಕಾಂಗ್ರೆಸ್ ದೇಶ ಒಡೆಯುವ ಮನಸ್ಥಿತಿಯಲ್ಲೇ ಇದೆ ಎಂಬ ಪ್ರಧಾನಿ‌ ಮೋದಿ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದು, ಬಿಜೆಪಿ ಯಾವತ್ತು ದೇಶ ಕಟ್ಟುವ ಕೆಲಸ ಮಾಡಿಲ್ಲ. ಬ್ರಿಟಿಷರ ವಿರುದ್ದ ಕಾಂಗ್ರೆಸ್ ಹೋರಾಡಿದಾಗ ಹಿಂದೂ ಮಹಾಸಭಾ ಬ್ರಿಟೀಷ್ ಪರ ಇದ್ದರು ಎಂದು ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು ಪಾಕಿಸ್ತಾನವನ್ನು ಇಬ್ಭಾಗ ಮಾಡಿದ್ದು ನಾವೇ ಅದನ್ನು ಹೊರತುಪಡಿಸಿ ಎಲ್ಲವನ್ನೂ ಒಗ್ಗೂಡಿಸಿದ್ದೇವೆ. ಆರ್ ಎಸ್ ಎಸ್ ಹಿಂದೂ ಮಹಾಸಭಾ ಎಂದೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿಲ್ಲ. ಅವರು ದೇಶ ಭಕ್ತರಲ್ಲ ಅಂತಾ ಹೇಳಲ್ಲ ಆದರೆ ಅವರು ಮಾತ್ರ ದೇಶಭಕ್ತರು ಬೇರೆಯವರು ಅಲ್ಲ ಅನ್ನೋದನ್ನ ನಾವು ಒಪ್ಪಲ್ಲ ಎಂದು ಟಾಂಗ್ ನೀಡಿದರು.

ಫೆಬ್ರವರಿ 7ರಂದು ದೆಹಲಿ ಪ್ರತಿಭಟನೆ ಸಮರ್ಥನೆ ಮಾಡಿದ ಸಚಿವ ದಿನೇಶ್ ಗುಂಡೂರಾವ್, ಅನಿವಾರ್ಯವಾಗಿ ಪ್ರತಿಭಟನೆ ಮಾಡಲಾಗುತ್ತಿದೆ. ಇದು ಕರ್ನಾಟಕದ ಪರಿಸ್ಥಿತಿ ಮಾತ್ರವಲ್ಲ. ಬಿಜೆಪಿ ಸರ್ಕಾರ ಇಲ್ಲದ ಎಲ್ಲಾ ರಾಜ್ಯದ ಪರಿಸ್ಥಿತಿ ಇದೆ ಆಗಿದೆ. ಈ ಕಾರಣಕ್ಕಾಗಿ ನಾವು ಪ್ರತಿಭಟನೆ ಮಾಡುತ್ತಿದ್ದೇವೆ. ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗುತ್ತದೆ ಎಂದು ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದರು.

ಬಿಜೆಪಿ ಸಂಸದರಿಗೆ ಮೋದಿ ಮುಂದೆ ಕೇಳುವ ಧೈರ್ಯವಿಲ್ಲ. ಸುಖಾ ಸುಮ್ಮನೆ ನಮ್ಮ ಮೇಲೆ ಕೂಗಾಡುತ್ತಾರೆ. ಇದೇ ಕೆಲಸವನ್ನು ಮೋದಿ ಮುಂದೆ ಮಾಡಿದ್ದರೆ ಪ್ರತಿಭಟನೆ ಅವಶ್ಯಕತೆಯೇ ಇರಲಿಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

 

Website |  + posts
RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments