ಮೈಸೂರು ; ಮೈಸೂರು, ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗುತ್ತಿದ್ದು ಇಂದು ಲೋಕಸಭಾ ಚುನಾವಣೆ ಸಂಬಂಧ ಸಂವಾದ ಕಾರ್ಯಕ್ರಮ ನಡೆಸಿದ್ದಾರೆ.
ನಗರದ ಚಾಮುಂಡಿಪುರಂನಲ್ಲಿರುವ ಆರಾಧ್ಯ ಮಹಾಸಭಾ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಸ್ಕರ್ ರಾವ್ ಅವರು ‘ನಿಮ್ಮ ಭಾಸ್ಕರ್ ರಾವ್’ ಎಂಬ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಭಾಸ್ಕರ್ ರಾವ್ ಅವರಿಗೆ ಟಿಕೆಟ್ ನೀಡಬೇಕೆಂದು ವಿಪ್ರರೆಲ್ಲರೂ ಸೇರಿ ಆಗ್ರಹಿಸಿದರು.
ಈ ವೇಳೆ ಮಾತನಾಡಿದ ಭಾಸ್ಕರ್ ರಾವ್, 34 ವರ್ಷ ನಾನು ಸರ್ಕಾರಿ ಸೇವೆ ಸಲ್ಲಿಸಿದ್ದೇನೆ. ಮೈಸೂರು, ಶಿವಮೊಗ್ಗ, ದಾವಣಗೆರೆ, ಬೆಂಗಳೂರು ಸೇರಿದಂತೆ ಎಲ್ಲಾ ಕಡೆ ಸೇವೆ ಸಲ್ಲಿಸಿದ್ದೇನೆ. ನನ್ನ ಅವಧಿಯಲ್ಲಿ ಯಾವುದೇ ಗಲಭೆಯಲ್ಲಿ ರಕ್ತ ಕ್ರಾಂತಿ ಆಗದಂತೆ ಸೇವೆ ಸಲ್ಲಿಸಿದ್ದೇನೆ. 34ವರ್ಷ ಯಾವುದೇ ಕಳಂಕವಿಲ್ಲದೆ ಸೇವೆ ಸಲ್ಲಿಸಿದ್ದೇನೆ. ನಮಗೆ ಸನಾತನ ಧರ್ಮ, ದೇಶ ತುಂಬಾ ಮುಖ್ಯ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಮುಂದೆ ಸಾಗೋಣ.ನೀವೆಲ್ಲರೂ ನನಗೆ ಆಶೀರ್ವಾದ ಮಾಡಿ. ನಾನು ಯಾರ ಬಗ್ಗೆಯೂ ಮಾತನಾಡಲ್ಲ, ವಿರುದ್ಧವಾಗಿಯೂ ಮಾತನಾಡಲ್ಲ. ನಮ್ಮ ಸೇವೆ ನಮ್ಮ ಕೆಲಸ ನಾವು ಮಾಡೋಣ ಎಂದು ಹೇಳಿದರು.