ರಾಮನಗರ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರುತ್ತಿವೆ. ಈ ನಡುವೆ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಬಿಡದಿಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
ಇನ್ನು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದರು. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿರುವ ಹಿನ್ನೆಲೆಯಲ್ಲಿ ಮೈಸೂರು-ಕೊಡಗು ಕ್ಷೇತ್ರಕ್ಕೆ ಜೆಡಿಎಸ್ ಬೇಡಿಕೆಯಿಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕ್ಷೇತ್ರದ ವಿಚಾರವಾಗಿ ಸಹಕಾರ ನೀಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಹಾಗೆಯೇ ಕುಮಾರಸ್ವಾಮಿಯನ್ನು ಭೇಟಿ ಮಾಡಿರುವ ಪ್ರತಾಪ್ ಸಿಂಹ, ಕಷ್ಟಕಾಲದಲ್ಲಿ ಸತ್ಯಸಂಗತಿಯನ್ನು ಜನರ ಮುಂದಿಟ್ಟು ಬೆನ್ನಿಗೆ ನಿಂತ ಕುಮಾರಣ್ಣನಿಗೆ ಕುಮಾರಸ್ವಾಮಿಗೆ ಧನ್ಯವಾದ ತಿಳಿಸಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.ರಾಜಕೀಯ ಚರ್ಚೆಗಳ ಪ್ರಕಾರ.. ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ. ಜೆಡಿಎಸ್-ಬಿಜೆಪಿ ಮೈತ್ರಿ ಹಿನ್ನೆಲೆಯಲ್ಲಿ ಕುಮಾರಸ್ವಾಮಿಯನ್ನು ಭೇಟಿ ಮಾಡೋದು ಪ್ರತಾಪ್ ಸಿಂಹಗೆ ಅನಿವಾರ್ಯ ಎನ್ನಲಾಗುತ್ತಿದೆ. ಯಾಕಂದರೆ ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರದಲ್ಲಿ ಎದುರಾಳಿಗಳನ್ನು ಎದುರಿಸಲು ಪ್ರತಾಪ್ ಸಿಂಹಗೆ ಕುಮಾರಸ್ವಾಮಿ ಬೇಕಿದೆ.ಇದೇ ವಿಚಾರದ ಬಗ್ಗೆ ಕುಮಾರಸ್ವಾಮಿ ಪ್ರತಾಪ್ ಸಿಂಹಗೆ ಸಲಹೆ ನೀಡಿದ್ದಾರೆ. ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರನ್ನು ಪ್ರತಾಪ್ ಸಿಂಹ ಭೇಟಿ ಮಾಡಿದ್ದರು.