Thursday, January 29, 2026
26.8 C
Bengaluru
Google search engine
LIVE
ಮನೆರಾಜಕೀಯಸಾಲ ಪಾವತಿಸದೆ ವಂಚನೆ ಆರೋಪ : ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

ಸಾಲ ಪಾವತಿಸದೆ ವಂಚನೆ ಆರೋಪ : ಪ್ರಕರಣ ರದ್ದು ಕೋರಿ ರಮೇಶ್ ಜಾರಕಿಹೊಳಿ ಅರ್ಜಿ

ಬೆಂಗಳೂರು : ಸಾಲ ಪಾವತಿಸದೇ ಸಹಕಾರಿ ಬ್ಯಾಂಕ್​ಗೆ  ವಂಚನೆ ಆರೋಪ ಪ್ರಕರಣ ರದ್ದು ಕೋರಿ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.

ತಮ್ಮ ವಿರುದ್ಧದ ಪ್ರಕರಣವನ್ನ ರದ್ದು ಮಾಡುವಂತೆ ಅವರು ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಕಂಪನಿಯ ಹುದ್ದೆಗಳಿಗೆ ರಾಜೀನಾಮೆ ನೀಡಿ ಹೊಸಬರನ್ನು ನೇಮಕ ಮಾಡಲಾಗಿದೆ. NCLT ಯಲ್ಲಿ ವಿಚಾರಣೆ ಬಾಕಿ ಇರುವಾಗ ಕ್ರಿಮಿನಲ್​ ಕೇಸ್​ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕ್ರಿಮಿನಲ್​ ಪ್ರಕರಣ ರದ್ದು ಮಾಡುವಂತೆ ರಮೇಶ್ ಜಾರಕಿಹೊಳಿ ಕೋರಿದ್ದಾರೆ.

ಸೌಭಾಗ್ಯ ಲಕ್ಷ್ಮೀ ಶುಗರ್​​ ಲಿಮಿಟೆಡ್​ ಕಂನಿಗಾಗಿ  232.82 ಕೋಟಿ ರೂ ಸಾಲ ಪಡೆದ ಬಳಿಕ ಮರುಪಾವತಿಸದ ಹಿನ್ನೆಲೆಯಲ್ಲಿ ಅಪೆಕ್ಸ್​ ಬ್ಯಾಂಕ್​ ದೂರು ನೀಡಿದ್ದು, ಇದರ ಅನ್ವಯ ರಮೇಶ್​ ಜಾರಕಿಹೊಳಿ ವಿರುದ್ಧ ಕ್ರಿಮಿನಲ್​ ಕೇಸ್​ ದಾಖಲಿಸಲಾಗಿದೆ. ಕೇಸ್​ ರದ್ದು ಪಡಿಸುವಂತೆ ಅವರು ಮನವಿ ಮಾಡಿದ್ದಾರೆ.

RELATED ARTICLES

ಪ್ರತ್ಯುತ್ತರ ಬಿಟ್ಟು

ದಯವಿಟ್ಟು ನಿಮ್ಮ ಅಭಿಪ್ರಾಯವನ್ನು ನಮೂದಿಸಿ!
ದಯವಿಟ್ಟು ನಿಮ್ಮ ಹೆಸರನ್ನು ಇಲ್ಲಿ ನಮೂದಿಸಿ

Most Popular

Recent Comments