ಮಂಡ್ಯ ಲೋಕಸಭಾ ಟಿಕೆಟ್ ಯಾರಿಗೆ ಸಿಗುತ್ತೆ ಬಿಸಿಬಿಸಿ ಚರ್ಚೆ ನಡುವೆ ಸಂಸದೆ ಸುಮಲತಾ ಹೊಸ ಬಾಂಬ್ ಸಿಡಿಸಿದ್ದಾರೆ. ನನಗೆ ಪ್ರಾಣಬೆದರಿಕೆ ಇದ್ರು ಗಣಿಗಾರಿಕೆ ವಿರುದ್ಧ ಜೀವವನ್ನು ಲೆಕ್ಕಿಸದೆ ಹೋರಾಟ ಮಾಡಿದ್ದೀನಿ ಎಂದು ಮಂಡ್ಯ ಜಿಲ್ಲಾ ಪಂಚಾಯ್ತಿ ಕಾವೇರಿ ಸಭಾಂಗಣದಲ್ಲಿ ಇಂದು ನಡೆದ ಸಂಸದರಾ ದಿಶಾ ಕೊನೆಯ ಸಭೆಯಲ್ಲಿ ಯಾವುದಕ್ಕೂ ಕೇರ್ ಮಾಡುವುದಿಲ್ಲ ಎಂಬ ಸಂದೇಶವನ್ನ ರವಾನಿಸಿದ್ದಾರೆ.
5 ವರ್ಷದ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತಾಡಿದ ಸುಮಲತಾ ಕುಡಿಯುವ ನೀರು, ಬಸ್ ನಿಲ್ದಾಣ, ರಸ್ತೆ ಸೇರಿ ಹಲವು ಅಭಿವೃದ್ಧಿ ಕಾರ್ಯಮಾಡಿದ್ದೀನಿ. ಜೀವ ಬೆದರಿಕೆ ನಡುವೆಯೂ ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡಿ ಅಕ್ರಮ ಗಣಿಗಾರಿಕೆ ನಿಷೇಧಿಸುವಲ್ಲಿ ಯಶಸ್ವಿಯಾಗಿದ್ದೇನೆ.
ಅಕ್ರಮ ಗಣಿಗಾರಿಕೆ ವಿರುದ್ಧ ಹೋರಾಟ ಮಾಡುವ ವೇಳೆ ನನಗೆ ನಿರಂತರವಾಗಿ ಒತ್ತಡ ಬರುತ್ತಾ ಇತ್ತು. ಗಣಿಗಾರಿಕೆ ಹೋರಾಟ ನಿಲ್ಲಿಸಲು ಪ್ರಾಣ ಬೆದರಿಕೆ ಸಹ ಹಾಕಲಾಗಿತ್ತು. ಕೆಆರ್‌ಎಸ್ ಉಳಿವಿಗಾಗಿ ಅಕ್ರಮ ಗಣಿಗಾರಿಕೆ ವಿರುದ್ಧ ನಾನು ಹೋರಾಟ ಮಾಡಿದ್ದೇನೆ. ಯಾವ ಬೆದರಿಕೆಗೆ ಹೆದರದೆ ಹೋರಾಡಿದ್ದೇನೆ. ನಮ್ಮ ಹೋರಾಟದ ಫಲವಾಗಿ ಹೈಕೋರ್ಟ್ ಗಣಿಗಾರಿಕೆ ನಿಷೇಧ ಮಾಡಿದೆ ಎಂದು ಸುಮಲತಾ ಹೇಳಿದರು.