ಬೆಂಗಳೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಎಂಎಲ್ಸಿ ಎಂಟಿಬಿ ನಾಗರಾಜ್ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಯಾವ ಕ್ಷೇತ್ರದಲ್ಲಿ ಯಾರು ಅಭ್ಯರ್ಥಿ ಆಗಬೇಕು ಎಂದು ಮುಂದೆ ಚರ್ಚೆ ಆಗುತ್ತದೆ. ಪಕ್ಷದ ಹಿರಿಯರ ಜೊತೆಗೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಬೆಂಗಳೂರು ನಗರದ ಗರುಡಾಚಾರಪಾಳ್ಯದಲ್ಲಿರುವ ನಿವಾಸದಲ್ಲಿ ಎಂಎಲ್ಸಿ ಎಂಟಿಬಿ ನಾಗರಾಜ್ ಅವರನ್ನು ಭೇಟಿಯಾದ ನಂತರ ಮಾತನಾಡಿದ ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿ ಮೊದಲ ಬಾರಿಗೆ ಎಂಟಿಸಿ ನಾಗರಾಜ್ ಅವರನ್ನು ಭೇಟಿಯಾಗಿದ್ದೇನೆ. ಎಂದೇ ಮಾತಲ್ಲಿ ಹೇಳಬೇಕು ಅಂದರೆ ಎಂಟಿಬಿ ನಾಗರಾಜ್ ವ್ಯಕ್ತಿಯಲ್ಲ. ಶಕ್ತಿ. ಇಡೀ ರಾಜ್ಯದಲ್ಲಿ ಅವರದೇ ಆದತಂಹ ಜನ ಬೆಂಬಲವನ್ನ ಗಳಿಸಿಕೊಂಡಿರುವ ಎಂಟಿಬಿ ನಾಗರಾಜ್ ಅವರು ಬಿಜೆಪಿಯ ಶಕ್ತಿಯಾಗಿ ದುಡಿಯುತ್ತಿದ್ದಾರೆ ಎಂದರು.
ಲೋಕಸಭೆಯಲ್ಲಿ ಹೆಚ್ಚಿನ ಅಭ್ಯರ್ಥಿಗಳ ಗೆಲುವಿಗೆ ಸಂಕಲ್ಪ : ಎಂಟಿಬಿ ನಾಗರಾಜ್
ವಿಜಯೇಂದ್ರ ರಾಜ್ಯಾಧ್ಯಕ್ಷನಾಗಿ ಮೊದಲ ಬಾರಿಗೆ ಎಂಟಿಬಿ ನಾಗರಾಜ್ ಅವರನ್ನು ಭೇಟಿಯಾದ ನಂತರ ಮಾತನಾಡಿದ ಎಂಟಿಬಿ ನಾಗರಾಜ್ ಅವರು, ಲೋಕಸಭಾ ಚುನಾವಣೆಗೆ ಹೆಚ್ಚಿನ ಅಭ್ಯರ್ಥಿಗಳನ್ನ ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ವಿಜಯೇಂದ್ರ ಅವರು ನೂತನ ರಾಜ್ಯಾಧ್ಯಕ್ಷರಾದ ಮೇಲೆ ಸಂಕಲ್ಪ ಮಾಡಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರನ್ನ ಮೂರನೇ ಬಾರಿ ಪ್ರಧಾನಿಯಾಗಿ ಮಾಡಲು ಸಂಕಲ್ಪ ಮಾಡಿದ್ದಾರೆ. ಅದರ ಭಾಗವಾಗಿ ಸೌಹಾರ್ದಯುತವಾಗಿ ಭೇಟಿಯಾಗಿದ್ದಾರೆ. ನಾನು ಕೂಡ ಅವರಿಗೆ ಆಶಿರ್ವಾದ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ರಾಜ್ಯದ ಉದ್ದಗಲಕ್ಕೆ ಪ್ರವಾಸ ಮಾಡಲಿ. ಮುಂದಿನ ಪಾರ್ಲಿಮೆಂಟ್ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಲಿ. ಜವಬ್ದಾರಿ ಬಗ್ಗೆ ಚರ್ಚೆ ಮಾಡಿದ್ದೇವೆ. ಇನ್ನೂ ಚಿಕ್ಕಬಳ್ಳಾಪುರದಿಂದ ಸ್ಪರ್ಧೆ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷ ಏನ್ ತೀರ್ಮಾನವೇ ಅಂತಿಮ ಎಂದು ಎಂಟಿಬಿ ನಾಗರಾಜ್ ಹೇಳಿದರು.