ರಾಯಚೂರು: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ತೆರವು ಮಾಡಿರುವುದು ನೋಡಿದರೆ ಕಾಂಗ್ರೆಸ್ ಸರ್ಕಾರಕ್ಕೆ ಅಧಿಕಾರದ ದರ್ಪ ನೆತ್ತಿಗೇರಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ ಮಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಗ್ರಾ.ಪಂ ನಲ್ಲಿ ನಿರ್ಣಯ ಮಾಡಿದ್ರೂ ಧ್ವಜ ತೆರವು ಮಾಡಲಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವ ಕೆಲಸ ಕಾಂಗ್ರೆಸ್ ಮಾಡಿದೆ ಎಂದು ಟೀಕಿಸಿದರು. ಜಾಹಿರಾತು ನೀಡಿ ಜನರ ಬಳಿ ಕಾಂಗ್ರೆಸ್ ಕಾಲಹರಣ ಮಾಡುತ್ತಿದೆ. ಸಿದ್ದರಾಮಯ್ಯ ಅನುಭವಿ ಸಿಎಂ ಅವರು ಮೇಲೆ ಇದ್ದ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ಹೇಳಿದರು.
ಯಾವುದೇ ಹೊಸ ಸರ್ಕಾರ ಬಂದ ಮೇಲೆ ಐದಾರು ತಿಂಗಳು ಸಮಯಾವಕಾಶ ಕೊಡಬೇಕು. ಇಡೀ ದೇಶದಲ್ಲಿ ಹೊಸ ಸರ್ಕಾರ ಬಂದ ಮೇಲೆ ಜನಪ್ರಿಯತೆ ಕಳೆದುಕೊಂಡ ಮೊದಲ ಸರ್ಕಾರ ಕಾಂಗ್ರೆಸ್ ಸರ್ಕಾರವಾಗಿದೆ ಎಂದರು.