
ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ.
ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ.
ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ… pic.twitter.com/Fls5GfaRGs
— Siddaramaiah (@siddaramaiah) February 25, 2024
ಶಾಸಕರ ನಿಧನದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ತಿಳಿಸಿದರು.
ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. “ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಪಕ್ಷದ ನಿಷ್ಠಾವಂತ ನಾಯಕರಾದ ಇವರು ಕೆಲ ದಿನಗಳ ಹಿಂದಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು.
ಅವರ ಆತ್ಮಕ್ಕೆ ಶಾಂತಿ ಸಿಗಲಿ, ಈ ಅಗಲಿಕೆ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ” ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸುರಪುರ ಶಾಸಕ ಹಾಗೂ ಉಗ್ರಾಣ ನಿಗಮದ ಅಧ್ಯಕ್ಷರಾದ ರಾಜಾ ವೆಂಕಟಪ್ಪ ನಾಯಕ್ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಹಿನ್ನೆಲೆಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಸಂತಾಪ ಸೂಚಿಸಿದ್ದಾರೆ. ಕುಟುಂಬ ವರ್ಗದವರಿಗೆ ಕಳಿಸಿರುವ ತಮ್ಮ ಸಂತಾಪ ಸೂಚನಾ ಪತ್ರದಲ್ಲಿ ಶ್ರೀಯುತರೊಂದಿಗಿನ ತಮ್ಮ ಒಡನಾಟವನ್ನು ಸ್ಮರಿಸಿರುವ ಖರ್ಗೆ ಅವರು ರಾಜಾ ವೆಂಕಟಪ್ಪ ನಾಯಕ್ ಅವರ ನಿಧನದಿಂದಾಗಿ ಕಲಬುರಗಿ ವಿಭಾಗ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರಿಗೆ ತುಂಬಲಾಗದ ನಷ್ಠವಾಗಿದೆ ಎಂದಿದ್ದಾರೆ.
ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ವಾರ್ತೆ ಕೇಳಿ ನನಗೆ ಬಹಳ ನೋವುಂಟಾಯಿತು. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರು, ಜನಾನುರಾಗಿಗಳೂ ಆಗಿದ್ದ ಅವರ ನಿಧನ ರಾಜ್ಯ ರಾಜಕಾರಣಕ್ಕೆ ಆಗಿರುವ ಬಹುದೊಡ್ಡ ನಷ್ಟ ಎಂದು ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ವಾರ್ತೆ ಕೇಳಿ ನನಗೆ ಬಹಳ ನೋವುಂಟಾಯಿತು. ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ನಾಯಕರು, ಜನಾನುರಾಗಿಗಳೂ ಆಗಿದ್ದ ಅವರ ನಿಧನ ರಾಜ್ಯ ರಾಜಕಾರಣಕ್ಕೆ ಆಗಿರುವ ಬಹುದೊಡ್ಡ ನಷ್ಟ.
ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬದ ಸದಸ್ಯರಿಗೆ… pic.twitter.com/ZYeM6DCM7a
— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) February 25, 2024
ಶ್ರೀಯುತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಭಿಮಾನಿಗಳು, ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.
https://www.youtube.com/watch?v=-3ashWBjLz4




