Freedom TV

ರಾಜಾಜಿನಗರ ಮೆಟ್ರೋ ಸ್ಟೇಷನ್ ಬಳಿ ಅಗ್ನಿ ಅವಘಡ. ಸುಟ್ಟು ಕರಕಲಾದ 4 ಬೈಕ್​ಗಳು

ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ನಿಲ್ದಾಣ ಬಳಿ ಅಗ್ನಿ ಅವಘಡ ಸಂಭವಿಸಿದೆ . ರಾಜಾಜಿನಗರ ಮೆಟ್ರೋ ನಿಲ್ದಾಣ ಬಳಿ ನಿಂತಿದ್ದ 4 ಬೈಕ್​ಗಳಿಗೆ ಬೆಂಕಿ ತಗುಲಿದ್ದು ಬೈಕ್​ಗಳು ಸುಟ್ಟು ಕರಕಲಾಗಿವೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ‌ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇಂದು ಬೆಳಗಿನ ಜಾವ ರಾಜಾಜಿನಗರ ಮೆಟ್ರೋ ನಿಲ್ದಾಣದ ಬಳಿ ನಿಂತಿದ್ದ ಬೈಕ್​ಗಳಿಗೆ ಏಕಾಏಕಿ ಬೆಂಕಿ ತಗುಲಿದೆ. ಈ ಪರಿಣಾಮ ಬೈಕ್​ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ದ್ವಿಚಕ್ರ ವಾಹನಗಳು ಸುಟ್ಟು ಹೋದ ಕಾರಣ ಸವಾರರು ಕಂಗಾಲಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ‌ ನಂದಿಸಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Comments (0)

Your email address will not be published. Required fields are marked *

Back to top button