ರಾಜ್ಯಸುದ್ದಿ

ಕಾಲೇಜಿಗೆ ತೆರಳಲು ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳ ಪ್ರೊಟೆಸ್ಟ್

ರಾಮನಗರ : ಕಾಲೇಜಿಗೆ ತೆರಳಲು ಸಮರ್ಪಕವಾಗಿ ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ರಾಮನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ರಸ್ತೆ ತಡೆದು‌ ಆಕ್ರೋಶ ವ್ಯಕ್ತಪಡಿಸಿದರು.

ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಬಸ್ ಇಲ್ಲ, ಕೆಲವು ಬಸ್ ನಿರ್ವಾಹಕರು ವಿದ್ಯಾರ್ಥಿಗಳಿಗೆ ಬಸ್ ಹತ್ತಲು ಅವಕಾಶ ಕೊಡುವುದಿಲ್ಲ. ಇದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೊಡಿಕೊಂಡರು. ನಿಮ್ಮ ಸಮಸ್ಯೆ ಬಗೆಹರಿಸೋಣ ಆದರೆ ರಸ್ತೆ ತಡೆ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಪೊಲೀಸರು ಹೇಳಿದ ಮಾತಿಗೆ ಒಪ್ಪಿ ವಿದ್ಯಾರ್ಥಿಗಳು ರಸ್ತೆ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

Comments (0)

Your email address will not be published. Required fields are marked *

Back to top button